Site icon Suddi Belthangady

ಇಂದಬೆಟ್ಟು: ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ಆಡಳಿತ ಅಧಿಕಾರಿಯಿಂದ ಅಧಿಕಾರ ಸ್ವೀಕಾರ

ಇಂದಬೆಟ್ಟು: ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರ ಅವಧಿ ಮುಕ್ತಾಯಗೊಂಡಿದ್ದು, ಸರ್ಕಾರದಿಂದ ನೇಮಕಗೊಂಡ ಆಡಳಿತ ಅಧಿಕಾರಿ ಇಂದಬೆಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ಸೆ.17ರಂದು ಆಡಳಿತ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಂಜೀವ ಗೌಡ ಮನ್ನಡ್ಕ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಆನಂದ್ ಭಟ್, ಸಂತೋಷ್ ಉಂಬೆಜೆ, ರಾಜಶೇಖರ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Exit mobile version