ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 400 ಮೀಟರ್ ಹರ್ಡಲ್ಸ್ ನಲ್ಲಿ ಉಜಿರೆ ಎಸ್ಡಿಎಂ ಕಾಲೇಜ್ ನ ವಿಧ್ಯಾರ್ಥಿನಿ ಚಂದ್ರಿಕಾ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ.
ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ದಿ.ಮೋಹನ್ ಪೂಜಾರಿ ಮತ್ತು ಯಶೋಧ ದಂಪತಿಯ ಪುತ್ರಿ ಇವರು ಪ್ರಾಥಮಿಕ ಶಾಲಾ ಹಂತದಲ್ಲಿಯೇ ಹಲವಾರು ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರು 2022-23ನೇ ಸಾಲಿನ ಕೇರಳ ಕೊಚ್ಚಿಯಲ್ಲಿ ನಡೆದ ಹ್ಯಾಂಡ್ಬಲ್ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿ ಸೌತ್ ಇಂಡಿಯನ್ ಕ್ರೀಡಾಕೂಟದಲ್ಲಿ ಗಮನ ಸೆಳೆದಿದ್ದಾರೆ.
2022-23ರಲ್ಲಿ ಬೆಂಗಳೂರಿನಲ್ಲಿ ನಡೆದ ಅಮೆಚೂರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿದಲ್ಲದೆ, ಅದೇ ವರ್ಷ ಉಡುಪಿಯಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಕ್ರೀಡಾಕೂಟದಲ್ಲಿ 400 ಮೀಟರ್ ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನ ಹಾಗೂ 4,400 ಮೀಟರ್ ನಲ್ಲಿ ದ್ವಿತೀಯ ಸ್ಥಾನ, ಜೊತೆಗೆ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಮೆಚ್ಚುಗೆ ಗಳಿಸಿದ್ದಾರೆ. 2023-24 ರಲ್ಲಿ ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಅಮೆಚೂರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಅದೇ ವರ್ಷ ಮಂಗಳೂರಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ರೇಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.