Site icon Suddi Belthangady

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆಪ್ಟೆಂಬರ್ 17ರಂದು ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ, ಉಜಿರೆ ಮಸೀದಿಯ ಧರ್ಮಗುರು ಮಹಮ್ಮದ್ ಯಾಸಿರ್ ಹಬ್ಬವು ಕೇವಲ ಆಚರಣೆಗೆ ಮಾತ್ರ ಸೀಮಿತವಾಗದೆ ದೈವಭಕ್ತಿ, ಗುರುಹಿರಿಯರಿಗೆ ಗೌರವ ನೀಡಿ ಉತ್ತಮ ಮಾನವನಾಗಿ ಬಾಳುವುದಾಗಿದೆ ಎಂಬ ಸಂದೇಶವನ್ನು ನೀಡಿದರು.

ಶಾಲಾ ಸಂಚಾಲಕರಾದ ಅತೀ ವಂ ಫಾ ವಾಲ್ಟರ್ ಡಿಮೆಲ್ಲೋ ರವರು ಉತ್ತಮ ಜೀವನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸೌಹಾರ್ದತೆಯಿಂದ ಬಾಳಬೇಕೆಂದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಹಬ್ಬದ ಸಂದೇಶವನ್ನು ನೀಡಿ ಶುಭ ಹಾರೈಸಿದರು. ಶಾಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

9 ಮತ್ತು 3ನೇ ತರಗತಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವಿದ್ಯಾರ್ಥಿಗಳು ಮನೋರಂಜನಾ ಕಾರ್ಯಕ್ರಮದ ಮೂಲಕ ಹಬ್ಬದ ಮಹತ್ವ ಮತ್ತು ಸಂದೇಶವನ್ನು ಸಾರಿದರು. ವಿದ್ಯಾರ್ಥಿಗಳಾದ ಖುಷಿ ಈದ್ ಮಿಲಾದ್ ಹಬ್ಬದ ಮಹತ್ವವನ್ನು ತಿಳಿಸಿದರು. ಪ್ರದ್ಯೋತ್ ಸ್ವಾಗತಿಸಿದರು. ವೆಲೋನ ಪಿಂಟೋ ಕಾರ್ಯಕ್ರಮ ನಿರ್ವಹಿಸಿದರು. ಜುವೆಲ್ ಡಿಸೋಜ ವಂದಿಸಿದರು. ಸಹಶಿಕ್ಷಕಿಯರಾದ ಪ್ರಭಾ ಗೌಡ ಮತ್ತು ಶ್ರೀಲತಾ ಸಹಕರಿಸಿದರು.

Exit mobile version