ಉಜಿರೆ: ಉಜಿರೆ ರೈತ ಉತ್ಪಾದಕರ ಕಂಪನಿಯ ವಾರ್ಷಿಕ ಮಹಾಸಭೆ ಮತ್ತು ಷೇರು ಪತ್ರ ವಿತರಣೆ ಸೆ.18ರಂದು ನಡೆಯಿತು.
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ಶರತ್ ಕೃಷ್ಣ ಪಡುವೆಟ್ನಾಯ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಉಜಿರೆ ರೈತ ಉತ್ಪಾದಕರ ಕಂಪನಿ ಅಧ್ಯಕ್ಷ ಜಿ.ಗಣೇಶ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ಈಕೋವಾ ಕಂಪೆನಿ ಸಂಯೋಜಕ ತಿಪ್ಪೆ ಸ್ವಾಮಿ, ಡಿಕೆಸಿ, ಧರ್ಮೇಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಉಜಿರೆ ರೈತ ಉತ್ಪಾದಕರ ಕಂಪನಿ ನಿರ್ದೇಶಕರುಗಳಾದ ಜಯಂತ ನಡ, ಶಿವಾನಂದ ಮಯ್ಯ, ಪುಷ್ಪ ಗರ್ಡಾಡಿ, ಸದಸ್ಯರು ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಿನೇಶ್ ವರದಿ ವಾಚಿಸಿದರು. ನಿರ್ದೇಶಕ ಚಂದ್ರಶೇಖರ ಗೌಡ ನಿಡ್ಲೆ ಸ್ವಾಗತಿಸಿ, ಇನ್ನೊರ್ವ ನಿರ್ದೇಶಕ ಸೀತಾರಾಮ ಶೆಟ್ಟಿ ಕೆಂಬರ್ಜೆ ವಂದಿಸಿದರು.
p>