ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಇದರ ವಾರ್ಷಿಕ ಮಹಾಸಭೆ ಸೆ.19ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನದಲ್ಲಿ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ ಇವರ ಅಧ್ಯಕ್ಷತೆಯಲ್ಲಿ ಜರಗಿತು.ಸಂಘವು 2023-24 ನೇ ಸಾಲಿನಲ್ಲಿ ಸಂಘವು ರೂ.67 ಲಕ್ಷ ಲಾಭ ಶೇ.14 ಡಿವಿಡೆಂಡ್ ಘೋಷಣೆ ಮಾಡಿದರು.
ವರದಿ ಹಾಗೂ ಲೆಕ್ಕಪತ್ರಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಮಂಡಿಸಿದರು.
ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ ಹಾಗೂ ಮಾಜಿ ಶಾಸಕ ಪ್ರಭಾಕರ ಬಂಗೇರ ಮತ್ತು ಸಂಘದ ಹಿರಿಯ ಸದಸ್ಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
10ನೇ ತರಗತಿಯಲ್ಲಿ ಶೇ.90ಕ್ಕಿಂತ ಅಧಿಕ ಮತ್ತು ಪಿಯುಸಿಯಲ್ಲಿ ಶೇ.85ಕ್ಕಿಂತ ಅಧಿಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಣೇಶ್ ಭಂಡಾರಿ, ನಿರ್ದೇಶಕರಾದ ಮುನಿರಾಜ ಅಜ್ರಿ, ಪುರಂದರ, ನಾರಾಯಣ ಆಚಾರ್ಯ, ಅಶೋಕ್ ರೈ, ತಿಮ್ಮಯ್ಯ ನಾಯ್ಕ, ರಮೇಶ್ ನಲ್ಕೆ, ಹರಿಯಪ್ಪ ನಾಯ್ಕ್, ಪ್ರೇಮ ಎಂ., ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರಾದ ಹಾಗೂ ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಆರ್ಥಿಕ ಬ್ಯಾಂಕ್ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.
ಸಿಬ್ಬಂದಿ ನಳಿನಿ ಪ್ರಾರ್ಥನೆ ಮಾಡಿದರು.ಶ್ರೀನಾಥ್ ಕೆ.ಎಂ ಸ್ವಾಗತಿಸಿ, ನಿರ್ದೇಶಕಿ ರಾಧಾ ಧನ್ಯವಾದವಿತ್ತರು.