ಬೆಳ್ತಂಗಡಿ: ಬೆಳುವಾಯಿ ಶಾಖೆಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ದಶಮಾನೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿತ್ತು. ಮಂಗಳೂರಿನ ಕೆ.ಎಮ್.ಸಿ ಆಸ್ಪತ್ರೆ, ಮತ್ತು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಇದರ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬೆಳುವಾಯಿಯ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ, ಅಂಗಡಿ ಮನೆ ಕಮಲಮ್ಮ ಕಾಂಪ್ಲೆಕ್ಸ್ ಹಾಗೂ ಮೂಡಬಿದ್ರೆ ಯುವವಾಹಿನಿ ಘಟಕ ಇವರ ಜಂಟಿ ಸಹಯೋಗದೊಂದಿಗೆ ಸೆ.19ರಂದು ಬೆಳುವಾಯಿಯ ಕಮಲಮ್ಮ ಕಾಂಪ್ಲೆಕ್ಸ್ ನಲ್ಕಿ ಕಾರ್ಯಕ್ರಮ ಜರುಗಿತು.
ಸಂಘದ ನಿರ್ದೇಶಕ ಜಗದೀಶ್ಚಂದ್ರ ಡಿ.ಕೆ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕ ಭಾಸ್ಕರ್ ಎಸ್ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಬಗ್ಗೆ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶ್ವಥ್ ಕುಮಾರ್ ಪ್ರಾಸ್ತಾವಿಕ ಮಾತನಾಡಿದರು.
ಸುಮಾರು 230ಕ್ಕೂ ಹೆಚ್ಚಿನ ಮಂದಿ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಬೆಳುವಾಯಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಧ್ಯಕ್ಷ ರಾಜೇಶ್ ಸುವರ್ಣ ಎಮ್, ಯುವವಾಹಿನಿ ಮೂಡಬಿದ್ರೆ ಘಟಕ ಅಧ್ಯಕ್ಷ ಶಂಕರ್ ಎ ಕೋಟ್ಯಾನ್ ಬೆಳುವಾಯಿ, ಗ್ರಾಮ ಪಂಚಾಯತ್ ನ ಸದಸ್ಯ ನಾರಾಯಣ ಅಮೀನ್, ಕಮಲಮ್ಮ ಕಾಂಪ್ಲೆಕ್ಸ್ ಮಾಲಕ ಚಂದ್ರಶೇಖರ, ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಬಜಗೋಳಿ ಶಾಖಾ ವ್ಯವಸ್ಥಾಪಕ ಪ್ರವೀಣ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಸಂಘದ ನಿರ್ದೇಶಕ ಧರಣೇಂದ್ರ ಕುಮಾರ್ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಕಚೇರಿ ಹಿರಿಯ ವ್ಯವಸ್ಥಾಪಕ ಕೀರ್ತನ್ ಕುಮಾರ್, ಬೆಳುವಾಯಿ ಶಾಖಾ ವ್ಯವಸ್ಥಾಪಕ ಉಮೇಶ್ ಪೂಜಾರಿ, ಹಾಗೂ ಇತರ ಶಾಖೆಗಳ ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.