ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತಿಯ ಸಭಾಭವನದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ ನಡೆಯಿತು.
ಈ ಕಾರ್ಯಕ್ರಮಕ್ಕೆ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯವರಾದ ಭವಾನಿ ಶಂಕರ್ ರವರು ಭೇಟಿ ನೀಡಿ, ಮಹಿಳೆಯರ ಸಬಲೀಕರಣ ಕುರಿತಂತೆ ವಿವಿಧ ರೀತಿಯ ಯೋಜನೆಗಳಿವೆ ಅವುಗಳನ್ನು ಹೆಚ್ಚಾಗಿ ಬಳಸಿಕೊಂಡು ಸಶಕ್ತರಾಗಿ ಎಂದರು.
ಕಾರ್ಯಕ್ರಮದಲ್ಲಿ ಮುಂಡಾಜೆ ಗ್ರಾ.ಪಂ ಅಧ್ಯಕ್ಷ ಗಣೇಶ್ ಬಂಗೇರ, ಕಡಿರುದ್ಯಾವರ ಅಧ್ಯಕ್ಷೆ ರತ್ನಾವತಿ, ಮಲವಂತಿಗೆ ಉಪಾಧ್ಯಕ್ಷೆ ರೋಹಿಣಿ, ಮುಂಡಾಜೆ ಗ್ರಾ. ಪಂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ, ಕಡಿರುದ್ಯಾವರ ಕಾರ್ಯದರ್ಶಿ ಜನಾರ್ಧನ, ಎನ್.ಆರ್.ಎಲ್.ಎಮ್ ಬೆಳ್ತಂಗಡಿ ತಾಲೂಕು ನಿರ್ವಹಣಾ ಘಟಕದ ವ್ಯವಸ್ಥಾಪಕ ನಿತೇಶ್, ತಾಲೂಕು ತಾಂತ್ರಿಕ ಸಂಯೋಜಕರು(ಅ.ಇ) ಪೂರ್ಣಿಮಾ, ತಾಂತ್ರಿಕ ಸಹಾಯಕ ಅಭಿಯಂತರರರು ರೇಷ್ಮಾ, ತಾಂತ್ರಿಕ ಸಹಾಯಕಿ(ಕೃ/ತೋ/ಅ)ಕು.ಪ್ರಾರ್ಥನ, ತಾಲೂಕು ಐಇಸಿ ಸಂಯೋಜಕಿ ವಿನಿಷ, ಮುಂಡಾಜೆ, ಕಲ್ಮಂಜ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ನೆರಿಯ, ಚಾರ್ಮಾಡಿ ಗ್ರಾಮ ಪಂಚಾಯತಿಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಎಮ್.ಬಿ.ಕೆ, ಎಲ್.ಸಿ.ಆರ್.ಪಿ, ಕೃಷಿ ಸಖಿ, ಪಶು ಸಖಿ, ನರೇಗಾ ಸಿಬ್ಬಂದಿಗಳು ಉಪಸ್ಥಿತರಿದ್ದರು.