ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಆಯ್ಕೆ

0

ಕಲ್ಲಬೆಟ್ಟು: ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಬೆಂಗಳೂರಿನ ಗಾಂಧೀ ಭವನದಲ್ಲಿ ಸೆ.17ರಿಂದ 23ರವರೆಗೆ ನಡೆಯುವ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಮೂಡುಬಿದಿರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕಿ ಅಪೇಕ್ಷಾ ಶೆಟ್ಟಿ ಆಯ್ಕೆಯಾಗಿದ್ದಾರೆ.

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ನೃತ್ಯ, ಭಾಷಣ, ಪ್ರಬಂಧ, ಚಿತ್ರಕಲೆ, ಪೋಸ್ಟರ್ ಮೇಕಿಂಗ್, ಕಾರ್ಯಕ್ರಮ ನಿರೂಪಣೆ ಹೀಗೆ ಹಲವು ವಿಧದಲ್ಲಿ ತನ್ನನ್ನು ತೊಡಗಿಸಿಕೊಂಡು ಉತ್ತಮ ಸಾಂಸ್ಕೃತಿಕ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here