ಬಂದಾರು ಪ್ರಾಥಮಿಕ ಶಾಲೆಯ 14ನೇ ವಯೋಮಾನದ ಬಾಲಕಿಯರ ವಾಲಿಬಾಲ್ ತಂಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ

0

ಬಂದಾರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ರೋಟರಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ 14ನೇ ವಯೋಮಾನದ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಹಾಸನದಲ್ಲಿ ನಡೆಯುವ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಉತ್ತಮ ಪಾಸರ್ ಆಗಿ ಕು.ಅತಿಶ್ರೀ ಬಂದಾರು, ಉತ್ತಮ ಹೊಡೆತ ಗಾರ್ತಿಯಾಗಿ ಕು.ಯಶ್ಮಿತಾ ಬಂದಾರು ವೈಯಕ್ತಿಕ ಬಹುಮಾನ ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here