ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಮಟ್ಟದ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇತ್ರತ್ವದಲ್ಲಿ ಪಂಚಾಯತ್ ಅಧ್ಯಕ್ಷೆ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ತರಬೇತಿ ಕಾರ್ಯಾಗಾರ ಸೆಪ್ಟೆಂಬರ್ 19ರಂದು ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆರೋಗ್ಯ ಇಲಾಖೆಯ ಅಮ್ಮಿರವರು ಕಾರ್ಯಾಗಾರವನ್ನು ನಡೆಸಿಕೊಟ್ಟರು. ಸ್ವಚ್ಛತಾ ಹಿ ಸೇವಾ ಆಂದೋಲನದ ಬಗ್ಗೆ ಪಿಡಿಒ ರಶ್ಮಿ ರವರು ಮಾಹಿತಿ ನೀಡಿ ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಅನಂದ ಅಡಿಲು, ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಶಾಲಾ ಮುಖ್ಯೋಪಾಧ್ಯಾಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಂಚಾಯತ್ ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಸಹಕರಿಸಿದರು.