Site icon Suddi Belthangady

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಮಹತ್ವದ ಆದೇಶ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ.

ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ಆಂಧ್ರ ಪ್ರದೇಶದ ತಿರುಪತಿ ದೇವಾಲಯದಲ್ಲಿ ನೀಡುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಚರ್ಬಿ ಮಿಶ್ರಣವಾಗುತ್ತಿರುವ ಸುದ್ದಿ ಸ್ಫೋಟಗೊಂಡ ಬೆನ್ನಲ್ಲೇ ಕರ್ನಾಟಕ ಸರ್ಕಾರ ಎಲ್ಲಾ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪವನ್ನು ಬಳಸುವಂತೆ ಸುತ್ತೋಲೆ ಹೊರಡಿಸಿದೆ.

Exit mobile version