ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ್ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದ ಹಿಂದಿ ಪ್ರಾಧ್ಯಾಪಕಿ ಶ್ರುತಿ ಮನಕೀಕರ್ ಆಗಮಿಸಿ, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿಂದಿ ದಿವಸದ ಮಹತ್ವ, ಹಿಂದಿ ಲಿಪಿ ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವುದು ಮತ್ತು ಎಲ್ಲರೂ ಒಂದೇ ಎಂಬ ಭಾವದಿಂದ, ರಾಷ್ಟ್ರ ಪ್ರೇಮವನ್ನು ಬೆಳೆಸಿಕೊಂಡು, ಭ್ರಾತೃತ್ವದಿಂದ, ದೇಶದ ಗೌರವವನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಪ್ರತಿಜ್ಞೆ ಬೋಧಿಸಿದರು.
ಹಿಂದಿ ಪ್ರಬಂಧ ರಚನೆಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿ ಕುಮಾರಿ ನಿವೇದ್ಯಾ ನಿರೂಪಿಸಿ ಕುಮಾರಿ ಸಿಂಧೂರ ಸ್ವಾಗತಿಸಿ, ಕುಮಾರಿ ಶ್ರೇಷ್ಠ ಅತಿಥಿಗಳನ್ನು ಪರಿಚಯಿಸಿ, ಕುಮಾರಿ ಕಲ್ಪಿತಾ ವಂದಿಸಿದರು.ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ. ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಹಿಂದಿ ಶಿಕ್ಷಕಿಯರಾದ ಮಮತಾ ಮತ್ತು ಅಮೃತಾ ರೂಪುಗೊಳಿಸಿದ ಕಾರ್ಯಕ್ರಮದಲ್ಲಿ ಹಿಂದಿ ಭಾಷೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.