ತಾಲೂಕಿನ ಹಾಗೂ ಸುತ್ತಮುತ್ತಲಿನ ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನಲ್ಲಿ ಪರೀಕ್ಷಾ ಕಾರ್ಯಗಾರ

0

ಗುರುವಾಯನಕೆರೆ: ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ.ದ್ವಿತೀಯ ಪಿಯು ವಿದ್ಯಾರ್ಥಿಗಳಿಗಿರುವ ಅವಕಾಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ, ಪರೀಕ್ಷೆಗಳಿಗೆ ತಯಾರಾಗುವ ಬಗೆ, ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನೆನಪಿನ ಶಕ್ತಿ ವೃದ್ಧಿಯ ಬಗ್ಗೆ ವಿಸ್ತ್ರುತ ಮಾಹಿತಿಯ ಓರಿಯಂಟೇಷನ್ ಕಾರ್ಯಕ್ರಮ ಇದೇ ಸಪ್ಟೆಂಬರ್ 22ರ ಭಾನುವಾರ ಬೆಳಿಗ್ಗೆ 11:30ಕ್ಕೆ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನಲ್ಲಿ ನಡೆಯಲಿದೆ.

ಈ ಓರಿಯಂಟೇಷನ್ ನಲ್ಲಿ ನೀಟ್, ಜೆಇಇ, ಸಿಯುಇಟಿ (CUET), ಐಸಿಎಆರ್ (ICAR) ಸಿಯಿಟಿ (CET), ಹೋಟೆಲ್ ಮ್ಯಾನೆಜ್ಮೆಂಟ್, ಪ್ಯಾರಾ- ಮೆಡಿಕಲ್, ಎನ್ ಡಿ ಎ (NDA), ಹೀಗೆ ಹತ್ತು ಹಲವು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುವುದು, ಅದು ಅಲ್ಲದೆ ಈ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹಾಗೂ ವಿದ್ಯಾರ್ಥಿ ವೇತನಗಳ ಬಗ್ಗೆಯೂ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುವುದು.

ದ್ವಿತಿಯ ಪಿಯು ವಿಜ್ಞಾನ ವಿದ್ಯಾರ್ಥಿಗಳು ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನಿಖರ ಫಲಿತಾಂಶಕ್ಕಾಗಿ ನೆನಪಿನ ಶಕ್ತಿಯ ವೃದ್ಧಿ ಹೇಗೆ ಮಾಡಿಕೊಳ್ಳಬೇಕೆಂಬ ಬಗ್ಗೆ ಹೆಸರಾಂತ ಆಪ್ತ ಸಮಾಲೋಚನ ತಜ್ಞ ಶ್ರೀ ಗಂಗಾಧರ ಇ ಮಂಡಗಳಲೆ ಯವರು ತರಬೇತಿ ನೀಡಲಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳ ಹೆಸರಾಂತ ತರಬೇತಿದಾರರು ಹಾಗೂ ವಿಷಯ ತಜ್ಞರಾದ ಶ್ರೀ ಪ್ರತಾಪ್ ದೊಡ್ಡಮನೆ ಯವರು ಮಾಹಿತಿ ನಿಡಲಿದ್ದಾರೆ.

ಈ ಕಾರ್ಯಾಗಾರ ಸಂಪೂರ್ಣ ಉಚಿತವಾಗಿದ್ದು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿ ಹಾಗೂ ಅವರ ಪೋಷಕರು ಇದರಲ್ಲಿ ಭಾಗಿಯಾಗಿ ಇದರ ಸಂಪೂರ್ಣ ಪ್ರಯೋಜನ ಪಡೆಯಬಹುದು ಎಂದು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಕಾಶಿನಾಥ್ ಎಂ.ಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರಿಗೆ ಸಂಪರ್ಕಿಸಿ: 7618718791, 7618718792

LEAVE A REPLY

Please enter your comment!
Please enter your name here