ಉಜಿರೆ: ಎಸ್.ಡಿ.ಎಮ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆ ಇಲ್ಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಲ್ಯಾಬಿನ್ ಕ್ಯಾಬ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಸೂಕ್ಷ್ಮದರ್ಶಕದ ಮೂಲಕ ಏಕದಳ ದ್ವಿದಳ ಸಸ್ಯದ ಒಳ ವಿನ್ಯಾಸವನ್ನು ವಿದ್ಯಾರ್ಥಿಗಳು ವೀಕ್ಷಿಸಿದರು. ಇದಲ್ಲದೆ ಸಸ್ಯ ಶಾಸ್ತ್ರದ ಹಲವಾರು ಕೌತುಕ ಮೂಡಿಸುವಂತಹ ಪ್ರಯೋಗಗಳನ್ನು ವಿದ್ಯಾರ್ಥಿಗಳ ಸಭೆಯಲ್ಲಿ ಪ್ರದರ್ಶಿಸಲಾಯಿತು.
ಈ ಕಾರ್ಯಕ್ರಮವನ್ನು ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಭಿಲಾಷ್ ಕೆ.ಎಸ್ ಹಾಗೂ ಭವ್ಯ ಇವರು ಮಾರ್ಗದರ್ಶಿಸಿದರು. ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿಯರಾದ ಪದ್ಮಶ್ರೀ ಹಾಗೂ ಮೇಘ ಇವರೂ ಸಹಕರಿಸಿದರು.
ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಇವರು ಸಂಪೂರ್ಣ ಸಹಕಾರವನ್ನು ನೀಡಿದರು.163 ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದರು.
p>