Site icon Suddi Belthangady

ಬೆಳ್ತಂಗಡಿ: ರೋಟರಿ ಕ್ಲಬ್, ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ರೂ.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್‌ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಂಸ್ಥೆ, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಹಾಗೂ ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜಿನ ಪ್ರತಿಭಾವಂತ 151 ವಿದ್ಯಾರ್ಥಿಗಳಿಗೆ ತಲಾ ರೂ. 10,000 ದಂತೆ ಒಟ್ಟು ರೂ. 15,10,000 ಮೊತ್ತದ ವಿದ್ಯಾರ್ಥಿ ವೇತನವನ್ನು ಸೆ.21ರಂದು ಕಾಶಿಬೆಟ್ಟು ರೋಟರಿ ಸಭಾಭವನದಲ್ಲಿ ನಡೆಯಿತು.

ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳಾದ ಎಸ್.ಡಿ.ಎಂ, ವಾಣಿ, ಅನುಗ್ರಹ ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಶೇಕಡಾ 90ಕ್ಕಿಂತ ಅಧಿಕ ಅಂಕ ಗಳಿಸಿರುವ, ಆರ್ಥಿಕವಾಗಿ ಅವಶ್ಯಕವಿರುವ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಈ ಸ್ಕಾಲರ್ ಶಿಪ್ ಪ್ರಯೋಜನ ಪಡೆದುಕೊಂಡರು.

ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪ್ರತಿಷ್ಠಿತ ಹೌಸಿಂಗ್‌ ಫೈನಾನ್ಸ್ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಂಸ್ಥೆಯ ಉಪ ಪ್ರಧಾನ ವ್ಯವಸ್ಥಾಪಕ ಪ್ರಶಾಂತ್ ಜೋಶಿ, ರೋಟರಿ ಜಿಲ್ಲಾ ಗವರ್ನರ್ ರೋ.ವಿಕ್ರಮದತ್ತ, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ರೋ.ಪಿಯೂಶ್ ಜೈನ್, ರೋಟರಿ ಇಂದಿರಾ ಕ್ಲಬ್ ಸದಸ್ಯ ರೋ.ಜಗದೀಶ್ ಮುಗಳಿ, ರೋಟರಿ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀಕಾಂತ್ ಕಾಮತ್, ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಕೋಶಾಧಿಕಾರಿ ಅಬೂಬಕ್ಕರ್ ಉಪಸ್ಥಿತರಿದ್ದರು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ ಸ್ವಾಗತಿಸಿದರು.ಸುವೀರ್ ಜೈನ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಪದಾಧಿಕಾರಿಗಳು, ಸದಸ್ಯರು, ವಿದ್ಯಾರ್ಥಿ ವಿದ್ಯಾರ್ಥಿನಿಯರು, ಪೋಷಕರು ಹಾಜರಿದ್ದರು.

Exit mobile version