ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು ವತಿಯಿಂದ 26ನೇ ವರ್ಷದ ಭಜನಾ ತರಬೇತಿ ಕಮ್ಮಟ-2024 ಉದ್ಘಾಟನಾ ಸಮಾರಂಭ ಸೆ.22ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು. ಮೂಡಬಿದ್ರೆ ಜೈನ ಮಠದ ಜಗದ್ಗುರು ಡಾ.ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾರ್ಯ ವರ್ಯ ಸ್ವಾಮೀಜಿ ಉದ್ಘಾಟನೆ ಗೈದು ಶುಭ ಹಾರೈಸಿದರು. ಶ್ರೀ ಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ, ಧರ್ಮಸ್ಥಳದ ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್, ಭಜನಾ ಪರಿಷತ್ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.
ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಭಜನಾ ಕಮ್ಮಟದ ಕಾರ್ಯದರ್ಶಿ ವೀರು ಶೆಟ್ಟಿ ವರದಿ ವಾಚಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಐ. ಶಶಿಕಾಂತ ಜೈನ್ ಸ್ವಸ್ತಿ ಮಂತ್ರ ಗೈದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ವಂದಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕ್ಷೇತ್ರದ ವಿವಿಧ ವಿಭಾಗದ ಮುಖ್ಯಸ್ಥರು, ಭಜನಾ ಪರಿಷತ್ ಮತ್ತು ಭಜನಾ ಕಮ್ಮಟದ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.ವಿವಿಧ 11ಜಿಲ್ಲೆಯ 34 ತಾಲೂಕಿನ 109 ಭಜನಾ ಮಂಡಳಿಯಿಂದ ಆಗಮಿಸಿದ 169 ಶಿಬಿರಾರ್ಥಿಗಳು ಭಾಗವಹಿಸಿದ್ದರು.