ಮಡಂತ್ಯಾರು: ಸೇಕ್ರೇಡ್ ಹಾರ್ಟ್ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ

0

ಮಡಂತ್ಯಾರು: ಮಡಂತ್ಯಾರು ಸೇಕ್ರೇಡ್ ಹಾರ್ಟ್ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 20ರಂದು ನಡೆಯಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳ್ತಂಗಡಿಯ ಸಿನು ಅಬ್ರಹಾಂ ರವರು ಮಾತನಾಡಿ ವ್ಯಕ್ತಿಗತ ಕೌಶಲ, ಸಾಮಾಜಿಕ ಜವಾಬ್ದಾರಿ ಹಾಗೂ ಆರ್ಥಿಕ ವ್ಯವಸ್ಥೆಯನ್ನು ಚೆನ್ನಾಗಿ ನಿರ್ವಹಿಸುವ ಸಾಮರ್ಥ್ಯ ನಮ್ಮಲ್ಲಿ ಇರಬೇಕೆಂದು ಹೇಳುವ ಜೊತೆಗೆ ಜೀವನದಲ್ಲಿ ಶಿಕ್ಷಣದ ಮಹತ್ವವನ್ನು ತಿಳಿಹೇಳಿದರು. ತದನಂತರ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಈಶ್ವರ ಗೌಡ ಮಾತನಾಡಿ ವಿದ್ಯಾರ್ಥಿಗಳಿಗೆ ವಿವಿಧ ಕೌಶಲಗಳನ್ನು ನೀಡುವ ಮೂಲಕ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗಳನ್ನು ಕೊಂಡಾಡಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಅಲೆಕ್ಸ್ ಐವನ್ ಸಿಕ್ವೇರಾ ಮಾತನಾಡಿ ವಿದ್ಯಾರ್ಥಿಗಳು ಸಿಗುವ ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ವ್ಯಕ್ತಿತ್ವ ವಿಕಸನಕ್ಕೆ ಒತ್ತನ್ನು ನೀಡಬೇಕಾಗಿ ಹೇಳಿದರು. ವಾಣಿಜ್ಯ ಸಂಘದ ಸಂಯೋಜಕಿ ರೋಸ್ ಪ್ರಿಯಾ ಪಿಂಟೋ, ಅಧ್ಯಕ್ಷ ಮೊಹಮ್ಮದ್ ಮರ್ಜುಕ್, ಉಪಾಧ್ಯಕ್ಷ ವಿಜೇತ್ ಪಾಯ್ಸ್, ಕಾರ್ಯದರ್ಶಿ ಸೌಂದರ್ಯ ಎ. ಪಿ., ಜೊತೆ ಕಾರ್ಯದರ್ಶಿ ಸುಶ್ಮಿಕಾ, ಹಾಗೂ ಎಲ್ಲಾ ಸದಸ್ಯರು, ವಾಣಿಜ್ಯ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಕಾರ್ಯಕಮವನ್ನು ಅವಿತಾ ರವರು ನಿರೂಪಿಸಿದರು.ಅಧ್ಯಕ್ಷರಾದ ಮೊಹಮ್ಮದ್ ಮರ್ಜುಕ್ ಸ್ವಾಗತಿಸಿ, ಕಾರ್ಯದರ್ಶಿ ಸೌಂದರ್ಯ ವಂದಿಸಿದರು.

LEAVE A REPLY

Please enter your comment!
Please enter your name here