Site icon Suddi Belthangady

ವಲಯ ಮಟ್ಟದ ಪ್ರತಿಭಾ ಕಾರಂಜಿ: ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

ಬೆದ್ರಬೆಟ್ಟು: ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 2024-25ನೇ ಸಾಲಿನ ಬಂಗಾಡಿ ವಲಯ ಮಟ್ಟದ “ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ” ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಏಳನೇ ತರಗತಿಯ ಮೊಹಮ್ಮದ್ ಝಿಯಾದ್ ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ನಾಲ್ಕನೇ ತರಗತಿಯ ಅಮ್ನ ಫಾತಿಮಾ ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಆರನೇ ತರಗತಿಯ ಮೊಹಮ್ಮದ್ ಮಾಝಿನ್ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Exit mobile version