ಅರಸಿನಮಕ್ಕಿ: ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

0

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ವಲಯದ ಪೆರ್ಲ ಶಿಶಿಲ ಕಾರ್ಯಕ್ಷೇತ್ರದ ಭುವನೇಶ್ವರಿ ಮತ್ತು ಶ್ರೀ ದೇವಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಪೆರ್ಲ ರಾಜೀವ ಗಾಂಧಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರರವರು ನೆರವೇರಿಸಿ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರು ಪ್ರಬುದ್ಧತೆಯನ್ನು ಹೊಂದಿದ್ದು ಪ್ರತೀ ತಿಂಗಳು ಉತ್ತಮ ಮಾಹಿತಿಯೊಂದಿಗೆ ತಮ್ಮ ಪ್ರತಿಭೆಗಳನ್ನು ಹೊರಹಾಕಲು ಒಂದು ವೇದಿಕೆಯಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ದಿವ್ಯ ಜ್ಯೋತಿರವರು ಜ್ಞಾನ ವಿಕಾಸ ಕೇಂದ್ರದಲ್ಲಿ ಶಿಸ್ತು ಮತ್ತು ಉಪಯುಕ್ತ ಮಾಹಿತಿಗಳು ದೊರೆಯುತ್ತಿದ್ದು ಎಲ್ಲರು ಇದರ ಪ್ರಯೋಜನ ಪಡೆಯುವಂತೆ ತಿಳಿಸಿದರು. ಜನಜಾಗೃತಿ ತಾಲೂಕು ವೇದಿಕೆ ಸದಸ್ಯರಾದ ಚೆನ್ನಪ್ಪ ಗೌಡ ರವರು ವಲಯದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮಗಳು ಉತ್ತಮ ರೀತಿಯಲ್ಲಿ ನಡೆಯುತ್ತಿದ್ದೂ ಇತರ ಸಂಘಗಳಿಗೆ ಮಾದರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನ, ಒಕ್ಕೂಟದ ಅಧ್ಯಕ್ಷ ಅಣ್ಣುಗೌಡ ರವರು ಉಪಸ್ಥಿತರಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭುವನೇಶ್ವರಿ, ಜ್ಞಾನ ವಿಕಾಸ ಕೇಂದ್ರದ ಸದಸ್ಯೆ ಪ್ರತಿಮಾ ವಹಿಸಿದ್ದರು.ಜ್ಞಾನ ವಿಕಾಸ ಕೇಂದ್ರದ ಸದಸ್ಯರಾದ ಶೋಭಾ ಮತ್ತು ಸೇಸಮ್ಮರವರು ಅನಿಸಿಕೆ ವ್ಯಕ್ತ ಪಡಿಸಿದರು.

ವಲಯ ಮೇಲ್ವಿಚಾರಕಿ ಶಶಿಕಲಾ ನಿರೂಪಿಸಿ, ಸೇವಾಪ್ರತಿನಿಧಿ ಅರುಣಾ ಸ್ವಾಗತಿಸಿ, ಜ್ಞಾನ ವಿಕಾಸ ಸಮನ್ವಯಧಿಕಾರಿ ಮದುರವಸಂತ್ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಕೇಂದ್ರದ ಸದಸ್ಯರು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

p>

LEAVE A REPLY

Please enter your comment!
Please enter your name here