Site icon Suddi Belthangady

ಕೊಯ್ಯೂರು: ಸ್ವಚ್ಛತಾ ಕೀ ಸೇವಾ ಆಂದೋಲನ

ಕೊಯ್ಯೂರು: ಕೊಯ್ಯೂರು ಗ್ರಾಮ ಪಂಚಾಯತ್ ಮತ್ತು ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೆಡ್ ಕ್ರಾಸ್ ಘಟಕ ಇವುಗಳ ಸಹಯೋಗದಲ್ಲಿ ‘ಸ್ವಚ್ಛತಾ ಕೀ ಸೇವಾ ಆಂದೋಲನ’ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಕೊಯ್ಯೂರು ಕಾಲೇಜು ಬಳಿಯಿಂದ ಗ್ರಾಮ ಪಂಚಾಯತ್ ತನಕ ಮುಖ್ಯ ಮಾರ್ಗದ ಇಕ್ಕೆಲಗಳಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ, ಉಪಾಧ್ಯಕ್ಷ ಹರೀಶ್ ಗೌಡ, ಕಾಲೇಜು ಪ್ರಾಂಶುಪಾಲ ಮೋಹನ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಕಾಲೇಜು ಉಪನ್ಯಾಸಕ ವೃಂದ, ಸ್ವಚ್ಛತಾ ಘಟಕದ ಸದಸ್ಯರು ಮತ್ತು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Exit mobile version