Site icon Suddi Belthangady

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತ್ರ, ಸಿಎಂ ವಿರುದ್ಧ ಸೇಡಿನ ರಾಜಕೀಯ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತ್ರವಾಗಿದ್ದು, ರಾಜಭವನವನ್ನು ಎನ್‌ಡಿಎ ದುರ್ಬಳಕೆ ಮಾಡಿಕೊಂಡಿದೆ. ಜನಪರ ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯ ನಡೆಯುತ್ತಿದೆ. ನ್ಯಾಯಾಲಯವು ಸೆಕ್ಷನ್ 218ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ಮುಖ್ಯಮಂತ್ರಿಗಳು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

ಬಿಜೆಪಿ, ಜೆಡಿಎಸ್‌ ಪಕ್ಷದ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿಗಳ ಪರವಾಗಿ ಭದ್ರವಾಗಿ ನಿಂತಿದ್ದಾರೆ. ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳು ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಕರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಭಂಗ ಅನುಭವಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version