Site icon Suddi Belthangady

ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಪೆಂಡಿಸೈಟಿಸ್ ಸಮಸ್ಯೆ ಇರುವ 9 ವರ್ಷ ಪ್ರಾಯದ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಕಿರಣ್ ಹಾಗೂ ಅರೆವಳಿಕೆ ತಜ್ಞರಾದ ಡಾ| ಸುಪ್ರಿತ್ ಆರ್ ಶೆಟ್ಟಿ ಇವರ ತಂಡ ಶಸ್ತ್ರಚಿಕಿತ್ಸೆ ನಡೆಸಿದರು. ಶಸ್ತ್ರಚಿಕಿತ್ಸೆಗೆ ಒಳಗಾದ ಮಗು ಅತೀ ಕಡಿಮೆ ಅವಧಿಯಲ್ಲಿ ಚೇತರಿಸಿಕೊಂಡಿದ್ದು, ಡಿಸ್ಚಾರ್ಜ್ ಆಗಿರುತ್ತದೆ.

ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆಯಲ್ಲಿ ಅತೀ ಚಿಕ್ಕ ಗಾಯವಾಗುವುದರಿಂದ ರೋಗಿ ಬಹಳ ಬೇಗನೇ ಚೇತರಿಸಿಕೊಳ್ಳುತ್ತಾರೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯ ತುಂಬಾ ಕಡಿಮೆ ಇರುತ್ತದೆ. ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳು ಕೂಡ ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ. ನಗರದ ಹೈಟೆಕ್ ಆಸ್ಪತ್ರೆಗಳಲ್ಲಿ ದುಬಾರಿಯಾಗಿರುವ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿ ಅತ್ಯಂತ ಕಡಿಮೆ ದರದಲ್ಲಿ ಮಾಡಲಾಗುತ್ತಿದೆ. ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಡಿ.ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version