ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ, ಧಾರವಾಡ ಇದರ ಸಹಯೋಗದಲ್ಲಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ, ಹೇಮಾವತಿ ವಿ. ಹೆಗ್ಗಡೆಯವರ ಹಾಗೂ ಡಿ. ಹರ್ಷೇಂದ್ರ ಕುಮಾರ್ ಇವರ ನಿರ್ದೇಶನದಂತೆ ಅ.4 ಮತ್ತು 5ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ ನಡೆಯಲಿದೆ.
ಉಜಿರೆ ಎಸ್.ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ|ರೋಹನ್ ಎಂ. ದೀಕ್ಷಿತ್, ಧಾರವಾಡದ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯ ವಾಕ್ ಮತ್ತು ಶ್ರವಣ ತಜ್ಞರಾದ ಡಾ| ವಸೀಮ್ ಇವರಿಂದ ಎಲ್ಲಾ ವಯಸ್ಸಿನ ಜನರಿಗೆ ಮಾತು, ಭಾಷೆ ಮತ್ತು ಶ್ರವಣ ಸಂಬಂಧಿತ ಸಮಸ್ಯೆಗಳನ್ನು ಪರಿಶೀಲಿಸಲಾಗುವುದು.
ಈ ಶಿಬಿರದಲ್ಲಿ ಭಾರತ ಸರಕಾರದ ಎ.ಡಿ.ಐ.ಪಿ ಯೋಜನೆಯಡಿ ಶ್ರವಣ ಉಪಕರಣಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳ ಕುರಿತು ಮರ್ಗದರ್ಶನ ನೀಡಲಾಗುವುದು. ಮಾಹಿತಿಗಾಗಿ 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.