Site icon Suddi Belthangady

ಏಕೀಕೃತ ಪಿಂಚಣಿ ವ್ಯವಸ್ಥೆ ಕೈಬಿಡಿ: ಬೆಳ್ತಂಗಡಿ ತಾಲೂಕು ರಾಜ್ಯ ಸರಕಾರಿ ಎನ್ ಪಿ ಎಸ್ ನೌಕರರ ಸಂಘದಿಂದ ಮನವಿ

ಬೆಳ್ತಂಗಡಿ: ಕೇಂದ್ರ ಸರಕಾರದ ಏಕೀಕೃತ ಪಿಂಚಣಿ(ಯುಪಿಎಸ್) ವ್ಯವಸ್ಥೆ ಕೈಬಿಡಬೇಕು ಹಾಗೂ ರಾಜ್ಯ ಸರಕಾರ ನುಡಿದಂತೆ ನಡೆದು, ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಹಳೆ ಪಿಂಚಣಿ ವ್ಯವಸ್ಥೆ(ಓಪಿಎಸ್) ಜಾರಿ ಮಾಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಎನ್ ಪಿ ಎಸ್ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ತಹಸೀಲ್ದಾರ್ ರ ಮೂಲಕ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.

“No-NPS No-UPS. Only OPS” ಎಂಬ ಘೋಷವಾಕ್ಯದಡಿ ರಾಜ್ಯಾದ್ಯಂತ ಏಕಕಾಲದಲ್ಲಿ ಸೆಪ್ಟೆಂಬರ್ 26ರಂದು ಮನವಿ ಸಲ್ಲಿಕೆ ಅಭಿಯಾನದಡಿ ಈ ಮನವಿ ನೀಡಲಾಯಿತು.

ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು ಕಳೆದ 10 ವರ್ಷಗಳಿಂದ ಹಳೆ ಪಿಂಚಣಿ ವ್ಯವಸ್ಥೆ ಮರು ಸ್ಥಾಪಿಸುವ ವಿಷಯದಲ್ಲಿ ನಿರಂತರ ಹೋರಾಟ ನಡೆಸುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು ರಾಷ್ಟ್ರಮಟ್ಟದಲ್ಲಿ NMOPSನ ಸಹಯೋಗವನ್ನು ಹೊಂದಿದ್ದು ಸೆ.ರಂದು ನವದೆಹಲಿಯಲ್ಲಿ ನಡೆದ NMOPSನ ರಾಷ್ಟ್ರೀಯ ಕಾರ್ಯಕಾರಿಣಿಯ ತೀರ್ಮಾನದಂತೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ ಹಾಗೂ NATIONAL MOVEMENT FOR OLD PENSION SCHEME(R) NEWDELHI, (NMOPS) ಸಂಘಟನೆಗಳು Old Pension Scheme ಗಾಗಿ ನಡೆಸಿದ ಹೋರಾಟದ ಫಲವಾಗಿ ಕೇಂದ್ರ ಸರ್ಕಾರವು NPS ಯೋಜನೆಯನ್ನು ಬದಲಾಯಿಸಿ, ಏಕೀಕೃತ ಪಿಂಚಣಿ ಯೋಜನೆಯನ್ನು(UPS) ಜಾರಿಗೆ ತರಲು ತೀರ್ಮಾನಿಸಿದೆ. ಸದರಿ ಯೋಜನೆಯು ಸಹ ಷೇರು ಮಾರುಕಟ್ಟೆ ಆಧಾರಿತವಾಗಿದ್ದು, ಸರ್ಕಾರಿ ನೌಕರರ ಸಂಧ್ಯಾಕಾಲದ ಬದುಕಿಗೆ ಯಾವುದೇ ಭದ್ರತೆಯನ್ನು ಒದಗಿಸುವ ಅಂಶಗಳನ್ನು ಹೊಂದಿರುವುದಿಲ್ಲ.

ಆದ್ದರಿಂದ, ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಹಿಂಪಡೆಯುವಂತೆ ಮತ್ತು ರಾಜ್ಯದಲ್ಲಿ NPS ಯೋಜನೆಯನ್ನು ಪರಾಮರ್ಶಿಸಲು ರಚಿಸಿರುವ ಸಮಿತಿಯನ್ನು ಸಂಘವು ತೀವ್ರವಾಗಿ ವಿರೋಧಿಸುತ್ತಾ, ಕಾಂಗ್ರೆಸ್‌ ಪಕ್ಷವು ಈಗಾಗಲೇ ನಮ್ಮ ಸಂಘಟನೆಗೆ ನೀಡಿರುವ ಭರವಸೆಯಂತೆ, NPS ಅನ್ನು ರದ್ದುಗೊಳಿಸಿ, OPS ಅನ್ನು ಜಾರಿಗೊಳಿಸುವಂತೆ ಸರ್ಕಾರವನ್ನು
ಮನವಿಯಲ್ಲಿ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಸುರೇಶ್ ಮಾಚಾರ್, ಕಾರ್ಯದರ್ಶಿ ಸೀತಾರಾಮ್ ಗೌಡ ಬೆಳಾಲು, ಸಂಘಟನಾ ಕಾರ್ಯದರ್ಶಿ ಪರಮೇಶ್, ಸಂಘದ ಜಿಲ್ಲಾ ಪದಾಧಿಕಾರಿ ಪಿ.ಡಿ.ಒ.ಮೋಹನ್ ಬಂಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version