Site icon Suddi Belthangady

ಹೊಸಂಗಡಿಯಲ್ಲಿ ಎಲೆ ಚುಕ್ಕಿ ರೋಗ ನಿವಾರಣೆ ಕುರಿತು ಮಾಹಿತಿ ಕಾರ್ಯಾಗಾರ

ಹೊಸಂಗಡಿ: ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ, ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ, ಹೊಸಂಗಡಿ ಗ್ರಾಮ (ಸಂಯೋಜಕರು, ಬ್ಯಾಂಕ್ ಆಫ್ ಬರೋಡ) ಮತ್ತು ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಇವರ ಸಹಭಾಗಿತ್ವದಲ್ಲಿ, ಮುಂಚೂಣಿ ಪ್ರಾತ್ಯಕ್ಷಿಕೆ 2024-25ರ ಅಂಗವಾಗಿ, ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ಸೆ.25ರಂದು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಸಭಾಭವನದಲ್ಲಿ ನಡೆಯಿತು.

ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ.ಕೇದಾರನಾಥ ಮತ್ತು ತೋಟಗಾರಿಕಾ ವಿಜ್ಞಾನಿ ಡಾ.ರಶ್ಮಿ ಇವರು ರೈತರಿಗೆ ಸಮಗ್ರ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯ ಗ್ರಾಮದ ಸಮಿತಿ, ಹೊಸಂಗಡಿ ಗ್ರಾಮ ಅಧ್ಯಕ್ಷ, ಕಾರ್ಯಕ್ರಮ ಸಂಯೋಜಕ ಹರಿಪ್ರಸಾದ್.ಪಿ. ವಹಿಸಿ, ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆಯ ಮುಂಚೂಣಿ ಪ್ರಾತ್ಯಕ್ಷಿಕೆ 2024-25ನೇ ಸಾಲಿನಲ್ಲಿ ಸುಮಾರು 10 ರೈತರನ್ನು ಆಯ್ಕೆ ಮಾಡಿ ಅವರಿಗೆ ಅಡಿಕೆ ಎಲೆ ಚುಕ್ಕಿ ರೋಗದ ನಿರ್ವಹಣೆಗಾಗಿ ಪರಿಕರಗಳನ್ನು ನೀಡಲಾಯಿತು.

Exit mobile version