Site icon Suddi Belthangady

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿ ಸಭೆ

ಬೆಳ್ತಂಗಡಿ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿಯ ಬಗ್ಗೆ ಕ್ಷೇತ್ರಾಡಳಿತ ಸಮಿತಿಯ ಸಭೆ ಮಂಗಳೂರು ಕಂಕನಾಡಿ ಬ್ರಹ್ಮಬೈದರ್ಕಳ ಗರಡಿಯಲ್ಲಿ ಜರಗಿತು.ಅಧ್ಯಕ್ಷತೆಯನ್ನು ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೆರಾಜೆ ವಹಿಸಿದ್ದರು.

ಶ್ರೀ ಕ್ಷೇತ್ರದ ಧಾರ್ಮಿಕ ವಿಧಿವಿಧಾನಗಳ ಬಗ್ಗೆ ಮತ್ತು ಕ್ಷೇತ್ರದ ಗೆಜ್ಜೆಗಿರಿ ಮೇಳದ ಬಗ್ಗೆ ವಿವರವಾಗಿ ಚರ್ಚಿಸಲಾಯಿತು. ಗೆಜ್ಜೆಗಿರಿ ಮೇಳದ ಬುಕ್ಕಿಂಗ್ ಉತ್ತಮ ರೀತಿಯಲ್ಲಿ ನಡೆಯುತ್ತಿರುವ ಬಗ್ಗೆ ಸಭೆಯಲ್ಲಿ ಸಂತಸ ವ್ಯಕ್ತಪಡಿಸಲಾಯಿತು. ನವ್ರರಾತ್ರಿಯನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಮಾಜಿ ಅಧ್ಯಕ್ಷರು, ಕಂಕನಾಡಿ ಗರಡಿಯ ಅಧ್ಯಕ್ಷ ಚಿತ್ತರಂಜನ್ ಕಂಕನಾಡಿ ಸೂಕ್ತ ಸಲಹೆಗಳನ್ನು ನೀಡಿದರು.

ಕ್ಷೇತ್ರಾಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಪ್ರಸ್ತಾವನೆ ಸಲ್ಲಿಸಿ, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಲೆಕ್ಕಪತ್ರ ಮಂಡಿಸಿದರು.

ಸಮಿತಿಯ ಗೌರವಾಧ್ಯಕ್ಷ ಜಯಂತ ನಡುಬೈಲ್, ಉಪಾಧ್ಯಕ್ಷ ರವಿಪೂಜಾರಿ ಚಿಲಿಂಬಿ, ಕಳೆದ ವರ್ಷದ ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು, ಟ್ರಸ್ಟಿ ಶೈಲೇಂದ್ರ ಸುವರ್ಣ, ಮೇಳದ ಸಂಚಾಲಕರು ಹಾಗೂ ಟ್ರಸ್ಟಿ ನವೀನ್ ಸುವರ್ಣ ಸಜಿಪ, ಜೊತೆ ಕಾರ್ಯದರ್ಶಿ ಚಂದ್ರಶೇಖರ್ ಉಚ್ಚಿಲ್, ಮೋಹನ್ ದಾಸ್ ವಾಮಂಜೂರು, ಕ್ಷೇತ್ರದ ತಂತ್ರಿ ಶಿವಾನಂದ ಶಾಂತಿ, ಟ್ರಸ್ಟಿ ಸುಜೀತಾ ವಿ.ಬಂಗೇರ, ಜೀವಿತ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ ಪೂಜಾರಿ, ಜಯರಾಮ್ ಬಂಗೇರ, ಕ್ಷೇತ್ರದ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಮುಂತಾದವರು ಉಪಸ್ಥಿತರಿದ್ದರು.

Exit mobile version