Site icon Suddi Belthangady

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯಿ ಜಿ.ಕೆ ರಿಗೆ ವಿಶ್ವಾಮಿತ್ರ ಪ್ರತಿಭಾ ಪ್ರಶಸ್ತಿ-2024

ಬೆಳ್ತಂಗಡಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಬೆಂಗಳೂರು ಇವರು ಸೆ.27ರಂದು ಬೆಂಗಳೂರಿನಲ್ಲಿ 2024ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯಿ ಜಿ.ಕೆ ರಿಗೆ ವಿಶ್ವಾಮಿತ್ರ ಪ್ರತಿಭಾ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಪ್ರಶಸ್ತಿ ರೂ.15000 ನಗದು, ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ಹೊಂದಿದೆ. ಚಿನ್ಮಯಿ ಜಿ.ಕೆ ಪರವಾಗಿ ಅವರ ತಂದೆ ಗಣೇಶ್ ಭಟ್ ಇವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಿ ದಿನೇಶ್ ಗುಂಡೂರಾವ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

Exit mobile version