ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಪತ್ತು ನಿರ್ವಹಣಾ ತಂಡ, ಬೆಳ್ತಂಗಡಿ ಚಾಣಕ್ಯ ಸಂಜೀವಿನಿ ಮಹಿಳಾ ಸ್ವ ಸಹಾಯ ಒಕ್ಕೂಟ, ಅಳದಂಗಡಿ ಗ್ರಾಮ ಪಂಚಾಯತ್, ಅಳದಂಗಡಿ ವರ್ತಕರ ಸಂಘ, ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಚ್ಛತಾಹೀ ಸೇವಾ ಕಾರ್ಯಕ್ರಮದಡಿಯಲ್ಲಿ ಆಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ “ಬೃಹತ್ ಸ್ವಚ್ಛತಾ ಕಾರ್ಯಕ್ರಮವು ಸೆ.27ರಂದು ಜರಗಿತು.
ಬಡಗಕಾರಂದೂರು ಗ್ರಾಮದ ಕೆದ್ದು ಜಂಕ್ಷನ್ ಬಳಿ ಪ್ರಚ್ಛತಾ ಕಾರ್ಯಕ್ರಮವನ್ನು ಪ್ರಾರಂಭಿಸಿ ಅಳದಂಗಡಿ ಸ.ಹಿ.ಪ್ರಾ.ಶಾಲೆ, ದೇವಸ್ಥಾನದ ಬಳಿ, ಅಳದಂಗಡಿ ಪೇಟೆ ಮುಖಾಂತರ ಮಾರಿಗುಡಿ ಬಳಿಯಲ್ಲಿ ಮುಕ್ತಾಯಗೊಲಿಸಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ರೀತಿಯ ವರ್ತಕರು ತಮ್ಮ ತಮ್ಮ ಅಂಗಡಿಯ ವಠಾರದಲ್ಲಿ ಹಾಗೂ ಎಲ್ಲಾ ರೀತಿಯ ಚಾಲಕರು ತಮ್ಮ ತಮ್ಮ ವಾಹನ ನಿಲ್ದಾಣದ ಸುತ್ತಮುತ್ತ ಸ್ವಚ್ಛತೆ ಮಾಡಿ ಸ್ವಚ್ಛತಾ ಕಾರ್ಯವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ನ ಸರ್ವಸದಸ್ಯರು, ಪಂಚಾಯತ್ ವ್ಯಾಪ್ತಿಯ ಎಲ್ಲಾ ಸಂಘ ಸಂಸ್ಥೆಯ ಎಲ್ಲಾ ಪ್ರತಿನಿಧಿಗಳು ಭಾಗವಹಿಸಿದ್ದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷೆ ಶಾಲಿನಿ, ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಗ್ರಾಮ ಪಂಚಾಯತ್ ಸಿಬ್ಬಂದಿ, ಗ್ರಾಮ ಪಂಚಾಯತ್ ಸದಸ್ಯರು, ಅಳದಂಗಡಿ ಕೆದ್ದು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.