ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಇದರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಸೆ.28ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಉದ್ಘಾಟನೆಯನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಬೆಳ್ತಂಗಡಿ ಜೆ.ಎಂ.ಎಫ್.ಸಿ ವಿಜಯೇಂದ್ರ ಟಿ.ಎಚ್ ಉದ್ಘಾಟನೆಯನ್ನು ಮಾಡಿದರು.ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ ರಾಘವ ಎನ್ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ವಕೀಲ ಧನಂಜಯ ಕುಮಾರ್ ಡಿ ಇವರು ಮಾದಕ ವ್ಯಸನದ ಕುರಿತು ಕಾನೂನು ಮಾಹಿತಿ ನೀಡಿದರು.ಪಡಂಗಡಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಂಜಿತ್ ಆರ್.ಬಿ ವಿಶ್ವ ಪೌಷ್ಟಿಕಾಂಶ ದಿನಾಚರಣೆ ಕುರಿತು ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ, ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎಸ್ ಸಂಚಾಲಕ ಡಾ.ಕುಶಾಲಪ್ಪ ಎಸ್, ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಯೋಜನಾಧಿಕಾರಿ ರೊನಾಲ್ಡ್ ಪ್ರವೀಣ್ ಕೊರೆಯ ಹಾಗೂ ಪ್ರೊ.ಕವಿತಾ, ಬೆಳ್ತಂಗಡಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಾದ ಜಯಂತಿ, ರವೀಂದ್ರ ನಾಯ್ಕ, ಸುಲೇಮಾನ್, ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿಯ ಸಿಬ್ಬಂದಿ ಯಲ್ಲಪ್ಪ ಹಂಗರಗಿ ಉಪಸ್ಥಿತರಿದ್ದರು.