Site icon Suddi Belthangady

ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆ: ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗಕ್ಕೆ ದ್ವಿತೀಯ ಸ್ಥಾನ

ಬೆಳ್ತಂಗಡಿ: ಮಂಗಳೂರಿನ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಜರುಗಿದ ನಾಲ್ಕನೇ ಐ ಎಸ್ ಟಿ ಇ ರಾಜ್ಯಮಟ್ಟದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಮಾವೇಶ-2024 ಇದರಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಉಜಿರೆಯ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ನ ಎರಡು ವಿಭಾಗಗಳಲ್ಲಿ ಪ್ರತ್ಯೇಕವಾಗಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಮಲ್ಟಿಪರ್ಪಸ್ ಅಗ್ರಿ ಟ್ರಾಲಿಯನ್ನು ವಿನ್ಯಾಸಗೊಳಿಸಲಾಗಿದೆ. ಆಧುನಿಕ ಕೃಷಿ ಪದ್ಧತಿಗೆ ಅನುಕೂಲವಾಗುವಲ್ಲಿ ಇದು ಸಹಕಾರಿಯಾಗಿದೆ. ಈ ಟ್ರಾಲಿಯನ್ನು ಬೈಕ್ ಮತ್ತು ಓಮಿನಿ ಬಿಡಿಭಾಗಗಳನ್ನು ಬಳಸಿ ನಿರ್ಮಿಸಲಾಗಿದೆ. ವಿದ್ಯಾರ್ಥಿಗಳಾದ ಸುಮಂತ್ ಎಸ್ ಕೋಟೆ, ಮನ್ವಿತ್ , ಎ ಅಮೀನ್ ಅಹ್ಮದ್, ಚೇತನ್ ಎಂ, ಗುರುರಾಜ್ ಕೆ ಮತ್ತು ವಿನಯ್ ಬಿ ಪಿ ಈ ಪ್ರಾಜೆಕ್ಟ್ ತಂಡದ ಸದಸ್ಯರಾಗಿದ್ದಾರೆ.

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗವು ಎಂ ಕ್ಯಾಮ್ (ಸ್ಮಾರ್ಟ್ ಸೆಕ್ಯೂರಿಟಿ ಕ್ಯಾಮೆರಾ) ಎಂಬ ಪ್ರಬಂಧ ಪ್ರಸ್ತುತಪಡಿಸಿದ್ದು, ಈ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಲಭಿಸಿದೆ. ಅಭಿಷೇಕ್ ಪ್ರಶಾಂತ್ ಮತ್ತು ರವಿಶಂಕರ್ ಪಾಟೀಲ್ ಈ ತಂಡದ ಸದಸ್ಯರಾಗಿದ್ದಾರೆ.

Exit mobile version