ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗಿಯಾಗಲಿರುವ ಬಂದಾರಿನ ಕೆ.ತೇಜಸ್ವಿನಿ ಪೂಜಾರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು

0

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ (81ಕೆಜಿ ವಿಭಾಗದ) ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳುವ ಉಜಿರೆ ಎಸ್ ಡಿ ಎಮ್ ಪ್ರಥಮ ವರ್ಷದ ವಿದ್ಯಾರ್ಥಿನಿ ಬಂದಾರು ಗ್ರಾಮದ ಕೆ ತೇಜಸ್ವಿನಿ ಪೂಜಾರಿಯವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಅ.1ರಂದು ಆರ್ಥಿಕ ನೆರವನ್ನು ನೀಡಿ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಜಯವೀಕ್ರಮ್ ಕಲ್ಲಾಪು, ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಎಚ್, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು ,ವಿದ್ಯಾರ್ಥಿನಿ ತಂದೆ ಕೆ ಚಿದಾನಂದ ಪೂಜಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here