ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಸಹಯೋಗದೊಂದಿಗೆ ಅ.2ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಜರಗಿತು.
ಅಧ್ಯಕ್ಷತೆಯನ್ನು ತಾಲೂಕು ಜನಜಾಗೃತಿ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ ವಹಿಸಿದ್ದರು. ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್, ಧರ್ಮಗುರುಗಳು ಹಾಗೂ ಪ್ ಅಲ್ ಅನ್ಸಾರ್ ವಾರದ ಪತ್ರಿಕೆಯ ಪ್ರಧಾನ ಸಂಪಾದಕ ಕೆ.ಎಂ.ಅಬೂಬಕ್ಕರ್ ಸಿದ್ಧಿಕ್ ಮೊಂಟುಗೋಳಿ, ಬೆಳ್ತಂಗಡಿ ಹೋಲಿ ರೆಡಿಮರ್ ಇಂಗ್ಲಿಷ್ ಮೀಡಿಯಾ ಪ್ರೌಢ ಶಾಲಾ ಮುಖ್ಯ ಶಿಕ್ಷಕ ವಂ. ಸ್ವಾಮಿ ಕ್ಲಿಫರ್ಡ್ ಪಿಂಟೋ ದಿವ್ಯ ಸಂದೇಶ ನೀಡಿದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಕೆ.ವಸಂತ ಸಾಲ್ಯಾನ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಶ್ರೀ ಕ್ಷೇ ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ವಿಮಾ ವಿಭಾಗ, ಕೇಂದ್ರ ಕಚೇರಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ್, ತಾಲೂಕು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಕೇಂದ್ರ ಸಮಿತಿ ಅಧ್ಯಕ್ಷ ಸೀತಾರಾಮ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಕೇಂದ್ರ ಸಮಿತಿ ಅಧ್ಯಕ್ಷ ಸದಾನಂದ ಬ೦ಗೇರ, ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರುಗಳಾದ, ಶಾರದಾ ರೈ, ಡಿ.ಎ.ರಹಿಮಾನ್, ವೆಂಕಟರಾವ್ ಅಡೂರು, ಪಿ.ಕೆ.ರಾಜು ಪೂಜಾರಿ, ತಿಮ್ಮಪ್ಪ ಗೌಡ, ಕಿಶೋರ್ ಹೆಗ್ಡೆ, ವಲಯದ ಅಧ್ಯಕ್ಷರುಗಳು, ಯೋಜನಾಧಿಕಾರಿಗಳಾದ ಸುರೇಂದ್ರ ಬೆಳ್ತಂಗಡಿ, ದಯಾನಂದ ಪೂಜಾರಿ ಗುರುವಾಯನಕೆರೆ ಉಪಸ್ಥಿತರಿದ್ದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಸುಶ್ರಾವ್ಯ ಗಾಂಧಿಸ್ಕೃತಿ ಹಾಡಿದರು. ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಸ್ವಾಗತಿಸಿ, ಕೃಷಿ ನಿರ್ದೇಶಕ ರಾಮ್ ಕುಮಾರ್ ನಿರೂಪಿಸಿದರು. ನವಜೀವನ ಸಮಿತಿ ಸದಸ್ಯರು, ಜನಜಾಗೃತಿ ವೇದಿಕೆಯ ಸದಸ್ಯರು, ಶೌರ್ಯ ವಿಪತ್ತು ತಂಡದ ಸದಸ್ಯರು ಹಾಜರಿದ್ದರು.