Site icon Suddi Belthangady

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ಸಂಭ್ರಮ ಮತ್ತು ವಿದ್ಯಾರ್ಥಿಗಳ ಆರೋಗ್ಯ ತಪಾಸಣಾ ಶಿಬಿರ

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಇಲ್ಲಿ ಗಾಂಧಿ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ನಡೆಸಲಾಯಿತು. ಗಾಂಧಿ ಜಯಂತಿಯ ಪ್ರಯುಕ್ತ ಬೆಳ್ತಂಗಡಿ ಜ್ಯೋತಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ವಿದ್ಯಾರ್ಥಿಗಳ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜನಾಬ್ ಸೈಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿ ಸೈಯದ್ ಅಯ್ಯುಬ್, ಕೋಶಾಧಿಕಾರಿ ಸೈಯದ್ ಇರ್ಫಾನ್, ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ಹಾಗೂ ಜ್ಯೋತಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಆನ್ ಗ್ರೇಸ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಅತಿಥಿಗಳು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಮಾತನಾಡಿ ಮಹಾತ್ಮ ಗಾಂಧೀಜಿಯವರ ಆದರ್ಶ ತತ್ವಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಆದರ್ಶ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿ ಗಾಂಧಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ಅವರ ಮಾರ್ಗದರ್ಶನದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವಿದ್ಯಾರ್ಥಿಗಳ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಿತು.

ಈ ಶಿಬಿರದಲ್ಲಿ ಇಬ್ಬರು ವೈದ್ಯರು ಹಾಗೂ ಐದು ಜನ ಶುಶ್ರೂಷಕಿಯವರ ತಂಡ ಬಹಳ ಯಶಸ್ವಿಯಾಗಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

Exit mobile version