ಬಾರ್ಯ: ಹೊಸ ಮನೆಗೆ ಅಳವಡಿಸಲು ತಂದಿರಿಸಲಾಗಿದ್ದ ದಾರಂದ ಬಿದ್ದು ಬಾಲಕಿ ಮೃತಪಟ್ಟ ಘಟನೆ ಅ.2ರಂದು ಪುತ್ತಿಲ ಗ್ರಾಮದ ಕುಂಡಡ್ಕ ಕೇರ್ಯಾ ಸಂಭವಿಸಿದೆ. ಸಮೀಪದ ಕೊನಲೆಯಲ್ಲಿ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಟ್ರಾ ದಂಪತಿಯ 4 ಹೆಣ್ಮಕ್ಕಳಲ್ಲಿ 3ನೆಯವಳಾಗಿದ್ದ ಕೇರ್ಯಾ ಸರಕಾರಿ ಶಾಲೆಯ 1ನೇ ತರಗತಿಯ ವಿದ್ಯಾರ್ಥಿನಿ ಅಲ್ಲಿಯಾ (6ವ) ಮೃತ ಬಾಲಕಿ.
ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದು, ಗುರುವಾರ ಮನೆಯ ಮುಖ್ಯದ್ವಾರಕ್ಕೆ ದಾರಂದ ಜೋಡಿಸಲಿತ್ತು. ಅದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ತಂದಿರಿಸಿದ್ದರು.ಬಾಲಕಿ ಆಟವಾಡುತ್ತಿದ್ದಾಗ ದಾರಂದ ಆಕೆಯ ತಲೆಗೆ ಬಿದ್ದು ಗಂಭೀರ ಗಾಯವಾಗಿತ್ತು. ಆಕೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾಳೆ.
ಕೇರ್ಯ ಮಸೀದಿಯಲ್ಲಿ ಅಂತ್ಯ ಸಂಸ್ಕಾರ ನಡೆಯಿತು.
p>