ಬೆಳ್ತಂಗಡಿ: ಗಾಂಧೀ ಜಯಂತಿಯ ಅಂಗವಾಗಿ ಬೆಳ್ತಂಗಡಿ ಶ್ರೀ ಗುರುದೇವಾ ಪ್ರಥಮ ದರ್ಜೆ ಕಾಲೇಜು ಸ್ವಚ್ಛತಾಹಿ ಸೇವಾ-2024 ಸ್ವಚ್ಛತಾ ಆಂದೋಲನಾ ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಅ.2ರಂದು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಸುಕೇಶ್ ಕುಮಾರ್ ವಹಿಸಿಕೊಂಡು ಅಧ್ಯಕ್ಷೀಯ ನುಡಿಗಳನ್ನಾಡಿದರು. ಉಪಪ್ರಾಂಶುಪಾಲರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಬಿ.ಎ ಶಮಿವುಲ್ಲಾ ವಿದ್ಯಾರ್ಥಿಗಳಿಗೆ “ಸ್ವಚ್ಛತಾಹಿ ಸೇವಾ” ದ ವಿಚಾರದ ಬಗೆಗೆ ಹಾಗೂ ಗಾಂಧೀಜಯಂತಿಯ ಆಚರಣೆಯ ಮಹತ್ವದ ಬಗ್ಗೆ ಮಾತಾನಾಡಿದರು.
ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿ, ಸಹಯೋಜನಾಧಿಕಾರಿಗಳು, ರೋವರ್ಸ್ ಮತ್ತು ರೆಂಜರ್ಸ್ ಘಟಕದ ಯೋಜನಾಧಿಕಾರಿಗಳು, ಸ್ವಯಂ ಸೇವಕರು, ಉಪನ್ಯಾಸಕ ವೃಂದ, ಕಛೇರಿ ಸಿಬ್ಬಂದಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಬಹು ಉತ್ಸಾಹಿಯಾಗಿ ಸ್ವಚ್ಛತೆಯಲ್ಲಿ ಪಾಲ್ಗೊಂಡು ಕಾಲೇಜಿನ ವಠಾರ, ರಸ್ತೆಗಳಲ್ಲಿ ಸ್ವಚ್ಛತೆಯನ್ನು ಮಾಡುವುದರ ಮುಖಾಂತರ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕಾರ್ಯಕ್ರಮವನ್ನು ಕನ್ನಡದ ಭಾಷಾ ಉಪನ್ಯಾಸಕ ಸತೀಶ್ ಸಾಲ್ಯಾನ್ ಸ್ವಾಗತಿಸಿ, ಉಪನ್ಯಾಸಕ ರಾಕೇಶ್ ವಂದಿಸಿದರು.