



ಬಳಂಜ: ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಅ.1ರಂದು ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ತಮ್ಮ ಪೋಷಕರೊಂದಿಗೆ ತುಂಬಾ ಸಂತೋಷದಿಂದ ಪಾಲ್ಗೊಂಡರು ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮದಲ್ಲಿ ಪೋಷಕರೊಂದಿಗೆ ಗಿಡ ನೆಡುವ ಕಾರ್ಯಕ್ರಮವು ಪರಿಸರ ಸಂರಕ್ಷಣೆಯ ಹಿತದೃಷ್ಟಿಯಲ್ಲಿ ಬಹಳ ಮುಖ್ಯವಾಗಿದೆ. ಮಕ್ಕಳು ಹಣ್ಣಿನ ಹಾಗೂ ತರಕಾರಿ ಗಿಡಗಳನ್ನು ಮತ್ತು ತೆಂಗಿನಕಾಯಿ ಅಡಿಕೆ ಸಸಿಗಳನ್ನು ನೇಡುವುದರ ಮೂಲಕ ಸಂಭ್ರಮಿಸಿದರು.
ಮಕ್ಕಳು ತಾವು ನೆಟ್ಟ ಗಿಡಕ್ಕೆ ತಮ್ಮ ತಮ್ಮ ತಾಯಂದಿರ ಹೆಸರನ್ನು ಇಟ್ಟು ತಾವೇ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡರು.ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡರು.









