


ಬಳಂಜ: ಅಟ್ಲಾಜೆ ದ.ಕ.ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಅ.2ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಮೊದಲು ಶಾಲಾ ವಿದ್ಯಾರ್ಥಿಗಳು ಅಂಗನವಾಡಿ ವಿದ್ಯಾರ್ಥಿಗಳು ಪೋಷಕರು ಶಾಲಾ ಶಿಕ್ಷಕರು ಹಾಗೂ ಎಸ್ ಡಿ ಎಂ ಸಿ ಯ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಸೇರಿದಂತೆ ಶಾಲಾ ಸುತ್ತಮುತ್ತ ಶ್ರಮದಾನ ನಡೆಸಿದರು.
ತದನಂತರ ಗಾಂಧೀಜಿಯವರ ಭಾವಚಿತ್ರಕ್ಕೆ ಹೂವನ್ನು ಅರ್ಪಿಸಲಾಯಿತು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳೆಲ್ಲರೂ ಸೇರಿ ಸರ್ವಧರ್ಮ ಪ್ರಾರ್ಥನೆಯನ್ನು ಮಾಡಿದರು.
ನಂತರ ಶಿಕ್ಷಕರುಗಳು ಹಾಗೂ ವಿದ್ಯಾರ್ಥಿಗಳು ಗಾಂಧೀಜಿಯವರ ಬಗ್ಗೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬಗ್ಗೆ ಭಾಷಣ ಮಾಡಿದರು. ಶಾಲಾ ಮುಖ್ಯೋಪಾಧ್ಯಾಯ ಪ್ರಮೋದ ಎಸ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸಹ ಶಿಕ್ಷಕಿ ಶ್ವೇತಾ ಆರ್ ಡಿ ಯವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.