ನೆರಿಯ ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

0

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ 02ರಂದು ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಜಂಟಿಯಾಗಿ ನಡೆಯಿತು.

ರಾಷ್ಟ್ರಪಿತ ಗಾಂಧೀಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಸಭೆಯ ಅಧ್ಯಕ್ಷೆ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ.ಯು.ಸಿ.ಪೌಲೋಸ್ ವಹಿಸಿ ಮಾತನಾಡಿ, ಗಾಂಧೀಜಿಯವರು ಶಾಂತಿ-ಅಹಿಂಸೆಗಳ ಹರಿಕಾರ, ಸತ್ಯದ ಸರದಾರ. ನಮ್ಮ ರಾಷ್ಟ್ರಪಿತರ ಬದುಕು, ಬೋಧನೆ, ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು. ಸಿಯೋನ್ ಅಶ್ರಮದಲ್ಲಿ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು. ಹಿರಿಯರನ್ನು ಗೌರವಿಸಿ, ನೆಮ್ಮದಿಯ ಬದುಕು ಕಲ್ಪಿಸಿಕೊಡುವುದರಿಂದ ಮಾನವ ಜನ್ಮ ಸಾರ್ಥಕವಾಗಿಸಬಹುದೆಂದರು ಹಾಗೂ ಸಿಯೋನ್ ಆಶ್ರಮದಲ್ಲಿ ಯಾವುದೇ ಜಾತಿ-ಮತ, ಬೇಧ-ಭಾವವಿಲ್ಲದೇ ಬೇರೆ ಬೇರೆ ಧರ್ಮದ ಮೂವರು ಹಿರಿಯ ನಾಗರಿಕರನ್ನು ಗುರುತಿಸಿ, ಪ್ರತಿ ವರ್ಷ ಸನ್ಮಾನಿಸಲಾಗುವುದೆಂದು ತಿಳಿಸಿದರು.

ಬೆಳ್ತಂಗಡಿ ತಾಲೂಕಿನ ಹಿರಿಯ ನಾಗರಿಕರಾದ ಮಾಲಾಡಿ ಗ್ರಾಮದ ಕೋಡಿಯೇಲು ಬಸವನಗುಡಿ ನಿವಾಸಿ ಪದ್ಮನಾಭ ಸಾಲಿಯಾನ್, ಮೆಲಂತಬೆಟ್ಟು ಗ್ರಾಮದ ಕಲ್ಕಣಿಬೈಲು ಫೆಲಿಸಿಟಾಸ್ ಮೊರಿಸ್, ಚಾರ್ಮಾಡಿ ಗ್ರಾಮದ ಗೋಳಿಕಟ್ಟೆ ಹಸನಬ್ಬ ಇವರನ್ನು ಸನ್ಮಾನಿಸಲಾಯಿತು. ಸನ್ಮಾನಿಸಲ್ಪಟ್ಟ ಹಿರಿಯ ನಾಗರಿಕರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು. ಟ್ರಸ್ಟೀ ಸದಸ್ಯರಾದ ಮೇರಿ ಯು.ಪಿ.ಯವರು, ಸಂಸ್ಥೆಯ ವೈದ್ಯರಾದ ಶಿವಾನಂದ ಸ್ವಾಮಿ ಹಾಗೂ ಆಶ್ರಮನಿವಾಸಿಗಳಾದ ರಾಮಚಂದ್ರ ಭಂಡಾರಿ ಮತ್ತು ಗೀತಾಕಾಮತ್ರ ವೇದಿಕೆಯಲ್ಲಿ ಉಪಸ್ಧರಿದ್ದರು

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಆ.10ರಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಿರಿಯ ನಾಗರಿಕರ ಕ್ರೀಡಾಕೂಟದಲ್ಲಿ ಸಿಯೋನ್ ಆಶ್ರಮದ 6ಮಂದಿ ಫಲಾನುಭವಿಗಳು ಭಾಗವಹಿಸಿ ವಿಜೇತರಾದ ಅವರಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು ಹಾಗೂ ಸಿಯೋನ್ ಆಶ್ರಮದಲ್ಲಿ ಹಿರಿಯ ನಾಗರಿಕ ನಿವಾಸಿಗಳಿಗೆ ಒಳಾಂಗಣ ಆಟಗಳನ್ನು ಏರ್ಪಡಿಸಲಾಗಿದ್ದು, ಇದರಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಿಬ್ಬಂದಿಯವರಾದ ಸಿಂಧು ವಿ.ಎಂ.ರವರು ಸ್ವಾಗತಿಸಿ, ಸಿಬ್ಬಂದಿಯವರಾದ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು.

p>

LEAVE A REPLY

Please enter your comment!
Please enter your name here