ಉಜಿರೆ: “ಪ್ರಸ್ತುತ ವಿಜ್ಞಾನ ವಿದ್ಯಾರ್ಥಿಗಳು ಬರವಣಿಗೆಯಲ್ಲಿ ಬಹಳ ಹಿಂದೆ ಉಳಿದಿದ್ದಾರೆ. ಬಹು ಆಯ್ಕೆಯ ಪ್ರಶ್ನೆಗಳ ಹಾವಳಿಯಿಂದ ಬರೆಯುವ ಕಲೆಯನ್ನು ನಿಧಾನವಾಗಿ ಕಳೆದುಕೊಳ್ಳುತ್ತಿದ್ದಾರೆ” ಎಂದು ಮುಂಡಾಜೆಯ ವಿವೇಕಾನಂದ ಪಿ ಯು ಕಾಲೇಜು ಉಪ ಪ್ರಾಂಶುಪಾಲ ಪುರುಷೋತ್ತಮ್ ಶೆಟ್ಟಿ ಹೇಳಿದರು.
ಇಲ್ಲಿನ ಎಸ್.ಡಿ.ಎಂ. ವಸತಿಯುತ ಪದವಿಪೂರ್ವ ಕಾಲೇಜಿನಲ್ಲಿ ಆಂಗ್ಲ ಭಾಷಾ ವಿಭಾಗವು ಆಯೋಜಿಸಿದ್ದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬದಲಾವಣೆ ಆಗಿರುವ ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆಯ ರೂಪುರೇಷೆ ಕುರಿತು ವಿದ್ಯಾರ್ಥಿಗಳಲ್ಲಿ ಮಾಹಿತಿ ಹಂಚಿಕೊಂಡರು.
ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಅಧ್ಯಕ್ಷತೆ ವಹಿಸಿದ್ದರು.ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ಭವ್ಯಶ್ರೀ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.