Site icon Suddi Belthangady

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ (ಸಿ.ಬಿ.ಎಸ್.ಇ) ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಲಾ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಹಾಗೂ ಗುಂಪುಗಾಯನ ಹಾಡಲಾಯಿತು. ಶಿಕ್ಷಕಿ ಶೋಭಿತ ದಿನದ ಮಹತ್ವದ ಕುರಿತು ಭಾಷಣ ಮಾಡಿದರು.

ಶಾಲಾ ಸ್ವಚ್ಛತೆಯಲ್ಲಿ ಸ್ವಚ್ಛತಾ ಸೇನಾನಿಗಳಾದ ಕವಿತ, ಗುಣಾವತಿ ಹಾಗೂ ಸುಮಾ ಇವರನ್ನು ಸನ್ಮಾನಿಸಲಾಯಿತು.

ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿ ಅವನಿ ಕಾರ್ಯಕ್ರಮ ನಿರೂಪಿಸಿದರು.

Exit mobile version