Site icon Suddi Belthangady

ಪುಂಜಾಲಕಟ್ಟೆ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

ಮಡಂತ್ಯಾರು: ಪುಂಜಾಲಕಟ್ಟೆ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ಅಕ್ಟೋಬರ್ 1ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣಂದೂರಿನಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಾಥಮಿಕ ಹಂತದ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯಲ್ಲಿ ಪ್ರಥಮ ಸ್ಥಾನವನ್ನು ಹಾಗೂ ಹಿರಿಯ ವಿಭಾಗದ ಸಮಗ್ರ ಪ್ರಶಸ್ತಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುವ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

Exit mobile version