Site icon Suddi Belthangady

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ದಿನಾಚರಣೆ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರ ನಾಯಕರಾದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನವನ್ನು ಆಚರಿಸಲಾಯಿತು.

ರಾಷ್ಟ್ರ ನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಸರ್ವ ಧರ್ಮ ಪ್ರಾರ್ಥನೆಯನ್ನು ನಡೆಸಿಕೊಟ್ಟರು. ಶಾಲಾ ಮುಖ್ಯೋಪಾಧ್ಯಾಯ ವಂ.ಫಾ ಕ್ಲಿಫರ್ಡ್ ಪಿಂಟೋರವರು ನಾವೆಲ್ಲರೂ ರಾಷ್ಟ್ರ ನಾಯಕರು ತೋರಿಸಿದ ಹಾದಿಯಲ್ಲಿ ಮುನ್ನಡೆದು ದೇಶದ ಸತ್ಪ್ರಜೆ ಗಳಾಗಿ ಬಾಳಬೇಕೆಂದು ನುಡಿದು ಶುಭ ಹಾರೈಸಿದರು.

ವಿದ್ಯಾರ್ಥಿಗಳೊಂದಿಗೆ ಶಿಕ್ಷಕ ವೃಂದದವರು ಶಾಲಾ ಆವರಣವನ್ನು ಸ್ವಚ್ಛಗೊಳಿಸಿದರು.

ವಿದ್ಯಾರ್ಥಿನಿಯರಾದ ಜೆನಿಶಾ ವೇಗಸ್ ಸ್ವಾಗತಿಸಿ, ಸೃಷ್ಟಿ ಎಸ್ ವಂದಿಸಿ, ಅನಿಶಾ ಡೇಸಾ ಕಾರ್ಯಕ್ರಮ ನಿರೂಪಿಸಿದರು .

Exit mobile version