Site icon Suddi Belthangady

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ ನೆರವೇರಿತು.

ಮುಖ್ಯ ಶಿಕ್ಷಕ ನಾರ್ಬಟ್ ವಿನ್ಸೆಂಟ್ ಪೌಲ್ ರವರು ಗಾಂಧೀಜಿಯವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ವಿದ್ಯಾರ್ಥಿಗಳಿಗೆ ಗಾಂಧೀಜಿಯವರ ತತ್ವಗಳಾದ ಸತ್ಯ, ಅಹಿಂಸೆ, ದಯೆ, ತ್ಯಾಗ ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ತಿಳಿಸಿದರು.

ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳಿಂದ ಸರ್ವ ಧರ್ಮ ಪ್ರಾರ್ಥನೆ ಹಾಗೂ ಗುಂಪು ಗಾಯನ ಹಾಡಲಾಯಿತು.ನಂತರ ಸ್ವಚ್ಚತಾ ಕಾರ್ಯಕ್ರಮ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಂದ ನಡೆಯಿತು.

10ನೇ ತರಗತಿ ವಿದ್ಯಾರ್ಥಿನಿ ಲೆನಿಶಾ ಫೆರ್ನಾಂಡಿಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Exit mobile version