ಕನ್ಯಾಡಿ-2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.2ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಆಚರಿಸಲಾಯಿತು. 155ನೇ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಬೆಳಿಗ್ಗೆ ಶಾಲೆಯ ಆವರಣ ಹಾಗೂ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.
.ಎಸ್ ಡಿ ಎಂ ಸಿ ಅಧ್ಯಕ್ಷ ನಂದ ಕೆ ಇವರು ದೀಪ ಬೆಳಗಿಸಿ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು. ಶಿಕ್ಷಕ ವೃಂದದವರು ಹಾಗೂ ಶಾಲಾ ನಾಯಕ ಪುಷ್ಪ ನಮನ ಸಲ್ಲಿಸಿದರು.
ನಂತರ ಸರ್ವಧರ್ಮ ಪ್ರಾರ್ಥನೆಯನ್ನು, ಧರ್ಮ ಗ್ರಂಥಗಳ ಪಠಣವನ್ನು ಮಾಡಲಾಯಿತು. ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಕುರಿತಂತೆ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ತಾಯಿ ಹೆಸರಿನಲ್ಲಿ ಒಂದು ಗಿಡ ಯೋಜನೆಯಡಿ ನಮ್ಮ ಶಾಲೆಯ ಮಕ್ಕಳು ಪೋಷಕರೊಂದಿಗೆ ಶಾಲೆಗೆ ಆಗಮಿಸಿ ಕರಿಬೇವು, ಸೀತಾಫಲ, ನಿಂಬೆ, ನೇರಳೆ, ತೆಂಗು ಮೊದಲಾದ ಗಿಡಗಳನ್ನು ನೆಟ್ಟು ಅವುಗಳನ್ನು ಚೆನ್ನಾಗಿ ಬೆಳೆಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.