ಮುಂಡಾಜೆ ಕಾಲೇಜಿನಲ್ಲಿ ಎನ್ಎಸ್ಎಸ್ ಶಿಬಿರ ಉದ್ಘಾಟನೆ

0

ಮುಂಡಾಜೆ: ವಿದ್ಯಾರ್ಥಿ ಜೀವನದಲ್ಲಿ ಸೇವಾ ಮನೋಭಾವನೆ, ಶಿಸ್ತು, ಸಮಯ ಪಾಲನೆ, ಹಾಗೂ ಜಾತಿ ಮತ ಪಂಥಗಳ ಭೇದವಿಲ್ಲದೆ ಕೂಡಿ ಬಾಳುವ ಮನೋವೃತ್ತಿಯನ್ನು ಬೆಳೆಸಿಕೊಳ್ಳಲು ಎನ್ ಎಸ್ ಎಸ್ ಶಿಬಿರಗಳು ಸಹಾಯಕಾರಿ ಎಂದು ಶತಾಬ್ದಿ ವಿದ್ಯಾಲಯ ಸಮಿತಿ ಮುಂಡಾಜೆ ಇದರ ಸಂಚಾಲಕ ನಾರಾಯಣ ಫಡ್ಕೆ ಅಭಿಪ್ರಾಯಪಟ್ಟರು.

ಅವರು ಅ.3ರಂದು ಪೆರಿಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಜಾಲಿ ಓ ಎ ಇವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸೈಂಟ್ ಆಂಟನೀಸ್ ಚರ್ಚ್ ತೋಟತ್ತಾಡಿ ಇಲ್ಲಿನ ಧರ್ಮ ಗುರುಗಳಾದ ರೆ.ಫಾ.ಜೋಸ್ ಪೂವತ್ತಿಂಗಳ್ ಶುಭಾಶೀರ್ವಚನ ನೀಡಿದರು. ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿಯ ಆಡಳಿತ ಮೊಕ್ತೇಸರ ಪ್ರಕಾಶ್ ಹೊಸ್ಮಠ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರಿಯಡ್ಕದ ಮುಖ್ಯ ಶಿಕ್ಷಕರಾದ ಮೇರಿ ವಿ ವಿ, ಶ್ರೀ ಅಣ್ಣಪೂರ್ಣೇಶ್ವರಿ ಕ್ಷೇತ್ರ ಕುಡುಮಡ್ಕ ಇದರ ಆಡಳಿತ ಮೊಕ್ತೇಸರ ರಾಘವ ಗೌಡ ಕುಡುಮಡ್ಕ, ಶಿಬಿರ ನಿರ್ವಹಣಾ ಸಮಿತಿಯ ಅಧ್ಯಕ್ಷ ಸೋಮನಾಥ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎನ್ಎಸ್ಎಸ್ ಶಿವರಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿ, ಸಂಖ್ಯಾಶಾಸ್ತ್ರ ಉಪನ್ಯಾಸಕಿ ವಿದ್ಯಾ ರಾವ್ ವಂದಿಸಿದರು. ಕನ್ನಡ ಉಪನ್ಯಾಸಕಿ ವಸಂತಿ ಕಾರ್ಯಕ್ರಮ ನಿರ್ವಹಿಸಿದರು.

p>

LEAVE A REPLY

Please enter your comment!
Please enter your name here