ಬೆಳಾಲು: ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬೆಳಾಲು ಇದರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ ಲಾಯಿಲ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಇದರ ಮಾರ್ಗದರ್ಶನದಲ್ಲಿ ಬೆಳಾಲು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ, ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ, ರೋಟರಿ ಕ್ಲಬ್ ಬೆಳ್ತಂಗಡಿ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಉಜಿರೆ, ನವಜೀವನ ಸಮಿತಿಗಳು ಇವರ ಸಹಕಾರದೊಂದಿಗೆ, ಬೆಳಾಲು ನವಜೀವನ ಸಮಿತಿ ಸದಸ್ಯರ 25 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಬೆಳಾಲು ಶ್ರೀ ಧ.ಮ.ಪ್ರೌಢ ಶಾಲೆಯಲ್ಲಿ ಅ.4ರಿಂದ 11ರವರೆಗೆ ನಡೆಯಲಿರುವ 1867ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ ನಡೆಯಿತು.
ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ಯು. ಶರತ್ ಕೃಷ್ಣ ಪಡುವೆಟ್ನಾಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿಯ ಗೌರವಾಧ್ಯಕ್ಷ ಎನ್. ಜತ್ತನ್ನ ಗೌಡ ವಹಿಸಿದ್ದರು.ಯೋಜನೆಯ ನಿವೃತ್ತ ಪ್ರಾದೇದೀಕ ನಿರ್ದೇಶಕ ಸೀತಾರಾಮ ಶೆಟ್ಟಿ ಕೆಂಬರ್ಜೆ, ಜನಜಾಗೃತಿ ವಲಯ ಅಧ್ಯಕ್ಷೆ ಪುಷ್ಪವತಿ ಆರ್. ಶೆಟ್ಟಿ, ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಪಿ. ತಿಮ್ಮಪ್ಪ ಗೌಡ, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಪಜಿರಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ, ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೋಟರಿ ವಕೀಲ ಶ್ರೀನಿವಾಸ ಗೌಡ, ಬೆಳಾಲು ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಾರಾಯಣ ಗೌಡ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ, ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರುಗಳಾದ ಉಮರ್, ರತ್ನಾಕರ ಆಚಾರ್ಯ, ಗಂಗಾಧರ ಸಾಲಿಯಾನ್, ನೀಲಾವತಿ, ನವಜೀವನ ಸಮಿತಿ ಅಧ್ಯಕ್ಷರು ಸೂರಪ್ಪ ಗೌಡ, ಬಿರ್ಮಣ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಎಳ್ಳುಗದ್ದೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ಸ್ವಾಗತಿಸಿದರು. ಗಣೇಶ್ ಆಚಾರ್ಯ ಪ್ರಸ್ತಾವಿಕವಾಗಿ ಮಾತನಾಡಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಮಧುರ ಕಾರ್ಯಕ್ರಮ ನಿರೂಪಿಸಿದರು. ಯೋಜನೆಯ ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಪೂಜಾರಿ, ವಲಯ ಮೇಲ್ವಿಚಾರಕಿ ವನಿತಾ, ಜನಜಾಗೃತಿ ವೇದಿಕೆ, ನವಜೀವನ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.