Site icon Suddi Belthangady

ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ ಕೊಕ್ಕಡದ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಉದ್ಘಾಟಿಸಿ ಎನ್ ಎಸ್ ಎಸ್ ನ ಸ್ವಯಂಸೇವಕ ವಿದ್ಯಾರ್ಥಿಗಳಾದ ನೀವುಗಳು ಮಾಡಿದಂತಹ ಕೆಲಸ ಕಾರ್ಯಗಳು ಸಮಾಜದ ಒಳಿತಿಗೆ ಸಹಾಯವಾಗಬೇಕು ಹಾಗೂ ಬದುಕಿನಲ್ಲಿ ಸಿಹಿಯಾಗಿ ಉಳಿಯಬೇಕು, ಸಹಜೀವನ ಸಹೋದರತೆ, ಸಮಾಜಸೇವೆ ಸಮುದಾಯದಲ್ಲಿ ಬೆಳೆಯಲು ಇಂಥ ಶಿಬಿರಗಳಲ್ಲಿ ಕಲಿಯಲು ಮಾತ್ರ ಸಾಧ್ಯ ಎಂದರು ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಚಾರ್ಯ ವಿಶ್ವನಾಥ.ರೈ ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿ ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಂಡು ದೇಶದ ಭವಿಷ್ಯ ರೂಪಿಸುವಲ್ಲಿ ನಾವೆಲ್ಲ ಬದ್ಧರಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಸಂಚಾಲಕ ರೆ.ಫಾ.ನೋಮಿಸ್ ಕುರಿಯಾಕೋಸ್ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕೊಕ್ಕಡ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ಧರ್ಮಗುರು ರೆ.ಫಾ.ಶಾಜಿ ಮ್ಯಾತ್ಯು, ಕೊಕ್ಕಡ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ರೀನಾ, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ದಾಮೋದರ ಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉಮ್ಮರ್ ಬೈಲಂಗಡಿ, ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಏರಿಯಾಸ್.ಎಂ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಎನ್ ಎಸ್ ಎಸ್ ಸ್ವಯಂಸೇವಕ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಹ ಶಿಬಿರಾಧಿಕಾರಿ ಉಪನ್ಯಾಸಕ ಮಧು.ಎ.ಜೆ ಸ್ವಾಗತಿಸಿದರು. ಉಪನ್ಯಾಸಕಿ ಗೀತಾ.ಪಿ.ಬಿ ವಂದಿಸಿದರು. ಶಿಬಿರಾಧಿಕಾರಿ ಉಪನ್ಯಾಸಕ ವಿಶ್ವನಾಥ್ ಶೆಟ್ಟಿ.ಕೆ ಕಾರ್ಯಕ್ರಮ ನಿರೂಪಿಸಿದರು.

Exit mobile version