ಬಳಂಜ: ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ನಾಲ್ಕೂರು, ತೆಂಕಕಾರಂದೂರು ಇವರ ನೇತೃತ್ವದಲ್ಲಿ ಆಕ್ಟೊಬರ್ 6ರಂದು ದ್ವಿತೀಯ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಬಳಂಜ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಣಪತಿ ಹೋಮ ನಡೆದು ಶ್ರೀ ಶಾರದಾ ದೇವಿಯ ಮೂರ್ತಿ ಪ್ರತಿಷ್ಠಾನಗೊಂಡು ತದನಂತರ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ದೆಗಳು, ವಲಯ ಮಟ್ಟದ ಹಗ್ಗ ಜಗ್ಗಾಟ, ಧಾರ್ಮಿಕ ಸಭಾ ಕಾರ್ಯಕ್ರಮ, ಪಂಚಶ್ರೀ ಮಹಿಳಾ ಭಜನಾ ಮಂಡಳಿ ಸದಸ್ಯರು ಹಾಗೂ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಜಿಲ್ಲೆಯ ಹೆಸರಾಂತ ಕಲಾ ತಂಡದಿಂದ ಪಿಲಿ ನಲಿಕೆ, ತಾಲೂಕಿನ ವಿವಿಧ ಕುಣಿತ ಭಜನಾ ಮಂಡಳಿಗಳ ಸದಸ್ಯರಿಂದ ಕುಣಿತ ಭಜನಾ ಕಾರ್ಯಕ್ರಮ ಹಾಗೂ ಕೇರಳ ಚೆಂಡೆ, ವಿವಿಧ ವೇಷ ಭೂಷಣಗಳೊಂದಿಗೆ ಶ್ರೀ ಶಾರದಾ ದೇವಿಯ ಭವ್ಯ ಶೋಭಯಾತ್ರೆ ನಡೆಯಲಿದ್ದು ಕಾಪಿನಡ್ಕ ಫಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ.
ಈಗಾಗಲೇ ಯುವ ಸಮುದಾಯ ಕಾರ್ಯಕ್ರಮದ ಯಶಸ್ವಿಗೆ ಹಗಲಿರುಳು ಶ್ರಮಿಸುತ್ತಿದ್ದು ಸಂಘದ ಕ್ರಿಯಾಶೀಲ ಅಧ್ಯಕ್ಷ ಸಂತೋಷ್.ಪಿ.ಕೋಟ್ಯಾನ್ ಬಳಂಜರವರು ಕಾರ್ಯಕ್ರಮದಲ್ಲಿ ಎಲ್ಲರೂ ಅತ್ಯಂತ ಉತ್ಸಾಹದಿಂದ ಭಾಗವಹಿಸಬೇಕೆಂದು ವಿನಂತಿಸಿದ್ದಾರೆ.