ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಎಲ್ ಸಿ ಆರ್ ವಿದ್ಯಾ ಸಂಸ್ಥೆಗೆ ಬಹುಮಾನ

0

ಕಕ್ಯಪದವು: ಅ.4ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಸಿದ್ದಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ವಾಮದಪದವು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಶಾಲೆಗಳ 2024-25ರ ಕ್ರೀಡಾಕೂಟವು ನಡೆಯಿತು.

ವಾಮದಪದವು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನವನ್ನು ಪಡೆದಿರುತ್ತಾರೆ.

8ನೇ ತರಗತಿಯ ಚಿರಾಗ್ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ 10ನೇ ತರಗತಿಯ ಪ್ರೀತಮ್ ಸಾಲಿಯಾನ್ ಉದ್ದ ಜಿಗಿತದಲ್ಲಿ ತೃತೀಯ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ .

LEAVE A REPLY

Please enter your comment!
Please enter your name here