ಅಪರ ಸರಕಾರಿ ವಕೀಲ ಮನೋಹರ್ ಕುಮಾರ್‌ರಿಗೆ ಜೆಎಂಎಫ್‌ಸಿ ಪ್ರಕರಣಗಳ ಹೆಚ್ಚುವರಿ ಹೊಣೆಗಾರಿಕೆ

0

ಬೆಳ್ತಂಗಡಿ: ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ಎ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಳ್ತಂಗಡಿ ಪ್ರಧಾನ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಲಯ ಮತ್ತು ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ದಾಖಲಾಗುವ ಪ್ರಕರಣಗಳ ಹೆಚ್ಚುವರಿ ಹೊಣೆ ವಹಿಸಿಕೊಳ್ಳುವಂತೆ ಸರಕಾರ ಅದೇಶಿಸಿದೆ.

ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಸೂಚನೆ ಮೇರೆಗೆ ಸರ್ಕಾರದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ (ಆಡಳಿತ -2) ಅಧೀನ ಕಾರ್ಯದರ್ಶಿ ಆದಿನಾರಾಯಣ ಈ ಆದೇಶ ನೀಡಿದ್ದಾರೆ.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಶಿಫಾರಸಿನ ಮೇರೆಗೆ ಈ ಹೆಚ್ಚುವರಿ ಹೊಣೆ ವಹಿಸುವಂತೆ ವಿಧಾನ ಸಭಾಧ್ಯಕ್ಷರು ಸೂಚನೆ ನೀಡಿದ್ದರು.

p>

LEAVE A REPLY

Please enter your comment!
Please enter your name here